ನ್ಯೂಸ್

ವೃದ್ಧರೊಬ್ಬರಿಗೆ 15 ಲಕ್ಷ ರೂ. ವಂಚನೆ

ಆನ್‌ಲೈನ್ ವಂಚನೆಯಿಂದ ಜೆಪಿ ನಗರದ ವೃದ್ಧರೊಬ್ಬರು 15 ಲಕ್ಷ ರೂ. ಕಳೆದುಕೊಂಡಿದ್ದು, ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೇಸ್ ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಆನ್‌ಲೈನ್‌ಮೂಲಕ ಟ್ರೇಡಿಂಗ್ ನಡೆಸಲು ಮುಂದಾಗಿ ಅವರು ಹೇಳಿದ ನಾನಾ ಬ್ಯಾಂಕ್ ಖಾತೆಗೆ 15 ಲಕ್ಷ ರೂ.ವರೆಗೆ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಬಳಿಕ ಹಣ ವಾಪಸ್ ಬಾರದೇ ಇದ್ದಾಗ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ವಂಚನೆಯಾಗಿರುವುದು ಗೊತ್ತಾಗಿದೆ. ಈ ಸಂಬಂಧ ಸೆನ್ ಠಾಣೆಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.