ನ್ಯೂಸ್

ವೈದ್ಯನಾಥೇಶ್ವರ ದೇಗುಲದಲ್ಲಿ ವಿಶೇಷ ಪೂಜೆ

ಮದ್ದೂರು: ಮೊದಲ ಕಾರ್ತಿಕ ಸೋಮವಾರದ ಅಂಗವಾಗಿ ವೈದ್ಯನಾಥಪುರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ವೈದ್ಯನಾಥೇಶ್ವರ ದೇಗುಲದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು *ಹಮ್ಮಿಕೊಳ್ಳಲಾಗಿತ್ತು.

ಮೊದಲ ಕಾರ್ತಿಕ ಸೋಮವಾರದ ಅಂಗವಾಗಿ ಮದ್ದೂರು ಸಮೀಪದ ವೈದ್ಯನಾಥಪುರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ವೈದ್ಯನಾಥೇಶ್ವರ ದೇಗುದಲ್ಲಿ ದೇವರ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು.

ಮುಂಜಾನೆಯಿಂದಲೇ ದೇಗುಲದಲ್ಲಿ ದೇವರಿಗೆ ವಿಶೇಷ ಅಲಂಕಾರ, ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು *ಹಮ್ಮಿಕೊಳ್ಳಲಾಗಿತ್ತು ಹಾಗೂ ಆಗಮಿಸಿದ ಸಾವಿರಾರು ಭಕ್ತಾಧಿಗಳಿಗೆ ಅನ್ನಸಂತರ್ಪಣೆ *ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆ ಸೇರಿದಂತೆ ರಾಜ್ಯ ಹೊರ ಜಿಲ್ಲೆಗಳಿಂದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಮದ್ದೂರಿನಿಂದ ವೈದ್ಯನಾಥಪುರಕ್ಕೆ ಹೋಗಲು ಸರ್ಕಾರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.