ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ಘಟಕದ ವತಿಯಿಂದ ಜ.8ರಂದು ಬೆಳಗ್ಗೆ 10.30ಕ್ಕೆ ನಗರದ ಶಿವರಾತ್ರಿ ರಾಜೇಂದ್ರ ಭವನದಲ್ಲಿ 2024ರ ಶಕುಂತಲಾ ಜಯದೇವ ಶರಣ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಘಟಕದ ಅಧ್ಯಕ್ಷ ಮ.ಗು.ಸದಾನಂದಯ್ಯ ತಿಳಿಸಿದರು.
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ಕೆ.ಆರ್.ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಮೈಸೂರು ಕೃಷ್ಣಮೂರ್ತಿ ಅಭಿನಂದನಾ ನುಡಿ ಆಡುವರು. ಸಾಹಿತಿ ಡಾ.ಎಂ.ಎಸ್.ವೇದಾ, ಸಮಾಜ ಸೇವಕ ಎಸ್.ಮಹದೇವಯ್ಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಡಾ.ಶಕುಂತಲಾ ಜಯದೇವ ಅವರು ಉಪಸ್ಥಿತರಿರುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜ.18 ಮತ್ತು 19ರಂದು ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಿದ್ದರಾಮ ಬೆಲದಾಳ ಅವರು ಸರ್ವಾಧ್ಯಕ್ಷರಾಗಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಪಾಲ್ಗೊಳ್ಳಲು ಇಚ್ಛಿಸುವವರು 250 ರೂ. ನೀಡಿ ನೋಂದಣಿ ಮಾಡಿಕೊಂಡಲ್ಲಿ ಎರಡೂ ದಿನ ಪ್ರಸಾದ, ವಸತಿ ಸೌಲಭ್ಯ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗೆ ದೂ.95355 00538 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಪದಾಧಿಕಾರಿಗಳಾದ ಡಾ.ಎಚ್.ಮದ್ದು ಮಲ್ಲೇಶ್, ಟಿ.ಎಸ್. ಕುಮಾರಸ್ವಾಮಿ ಹಾಗೂ ಉಮಾಪತಿ ಹಾಜರಿದ್ದರು.