ನ್ಯೂಸ್

ಶಾಸಕ ಮಂತರ್‌ಗೌಡಗೆ ಸನ್ಮಾನ

ಶನಿವಾರಸಂತೆ:ಮಡಿಕೇರಿ ಕ್ಷೇತ್ರದ ನೂತನ ಶಾಸಕ ಡಾ.ಮಂತರ್‌ಗೌಡ ಅವರನ್ನು ಸಮಿಪದ ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜ ಹಾಗೂ ಕೊಡಗು ಅರೆಭಾಷೆ ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಮಂಗಳವಾರ ಸಂಗಯನಪುರ ಗ್ರಾಮದ ಅರೆಭಾಷೆ ಗೌಡ ಸಮಾಜದ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಅರೆಭಾಷೆ ಗೌಡ ಫೆಡೆರೇಶನ್ ಅಧ್ಯಕ್ಷ ಸೂರ್ತಲೆ ಸೋಮಣ್ಣ, ನಿರ್ದೇಶಕ ಆನಂದ್ ಕರಂದ್ಲಾಜೆ, ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ಕುಶಾಲನಗರ ಅರೆಭಾಷೆ ಗೌಡ ಸಮಾಜ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಹರೀಶ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಲೋಕೇಶ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜದ ಪದಾಧಿಕಾರಿಗಳು, ನಿರ್ದೇಶಕರು ಇದ್ದರು.