ತರೀಕೆರೆ: ಪುರಸಭೆ ವ್ಯಾಪ್ತಿಯ ಹಳಿಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಚ್.ಕೆ.ಶೇಖರಪ್ಪ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪುರಸಭೆ ಸದಸ್ಯ ಆರ್.ಕುಮಾರಪ್ಪ ಮಾತನಾಡಿ, ಶಿಕ್ಷಕ ಎಚ್.ಕೆ.ಶೇಖರಪ್ಪ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆಯುವ ಮೂಲಕ ವೈಯಕ್ತಿಕ ಮಾತ್ರವಲ್ಲ, ಶಾಲೆಯ ಘನತೆಯನ್ನೂ ಹೆಚ್ಚಿಸಿದ್ದಾರೆ. ಮಕ್ಕಳು ಇಂಥ ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಒಳ್ಳೆಯ ಅವಕಾಶ ಆಯ್ಕೆಮಾಡಿಕೊಳ್ಳಬೇಕು. ಪ್ರತಿಯೊಬ್ಬರೂ ಶಾಲೆಯ ಪ್ರಗತಿಗೆ ಶ್ರಮಿಸಿ ಜಿಲ್ಲೆಯಲ್ಲೇ ಮಾದರಿ ಶಾಲೆಯನ್ನಾಗಿ ಮಾರ್ಪಾಡುಗೊಳಿಸಲು ಪ್ರಯತ್ನಿಸಬೇಕು ಎಂದರು. ಎಸ್‌ಡಿಎಂಸಿ ಅಧ್ಯಕ್ಷ ವಸಂತ್‌ಕುಮಾರ್, ಮುಖ್ಯಶಿಕ್ಷಕ ಕೆ.ಮಂಜುನಾಥ್, ಸದಸ್ಯ ದತ್ತಾತ್ರೇಯ ಮತ್ತಿತರರಿದ್ದರು.