ನ್ಯೂಸ್

ಶ್ರೀ ಇಗ್ಗುತ್ತಪ್ಪ ದೇವಾಲಯದ ಅಧ್ಯಕ್ಷರಾಗಿ ಪೂವಣ್ಣ ಆಯ್ಕೆ

ನಾಪೋಕ್ಲು: ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಬಿ.ಯು.ಪೂವಣ್ಣ ಆಯ್ಕೆಯಾಗಿದ್ದಾರೆ.

ಸಮೀಪದ ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಎಲ್ಲ ಸದಸ್ಯರು ಒಮ್ಮತದಿಂದ ಬಿ. ಯು.ಪೂವಣ್ಣ ಅವರನ್ನು ಆಯ್ಕೆ ಮಾಡಿದ್ದು ಅವರು ಮುಂದಿನ ಮೂರು ವರ್ಷದ ಅವದಿಗೆ ಅಧ್ಯಕ್ಷರಾಗಿರುತ್ತಾರೆ.

ಸಮಿತಿ ಸದಸ್ಯರಾದ ಕುಶ ಭಟ್, ಕೆ.ಸಿ.ರಮೇಶ್, ಸಿ.ಡಿ.ಉಷಾ, ಕೆ.ಸಿ.ನೈಲ್, ಪಿ.ಎಂ.ನರೇಂದ್ರ, ಎ.ಜಗದೀಶ್, ಭೀಮಯ್ಯ, ಉಲ್ಲಾಸ್ ಆರ್., ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಪಿ.ಟಿ.ತಮ್ಮಯ್ಯ ಹಾಗೂ ಶ್ರೀಕಾಂತ್ ಹಾಜರಿದ್ದರು.

ಕಕ್ಕಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಾರ್ಯಕಾರಿ ಮಂಡಳಿ ಸಮಿತಿ ಸಭೆಯಲ್ಲಿ ಸದಸ್ಯರು ಭಾಗವಹಿಸಿದ್ದರು.