ವಿಜಯವಾಣಿ ಸುದ್ದಿಜಾಲ ಕೋಲಾರ
ನಗರದಲ್ಲಿ ಜ.೩ರಂದು ನಡೆದ ಕೋಲಾರ ಬಂದ್ ಸಂದರ್ಭದಲ್ಲಿ ಡಿಡಿಪಿಐ ಕಚೇರಿಗೆ ನುಗ್ಗಿ ಅಲ್ಲಿ ಗೋಡೆಗೆ ಹಾಕಿದ್ದ ಶ್ರೀಕೃಷ್ಣನ ಭಗವದ್ಗೀತೆ ಸಂದೇಶದ ಗೀತ ಸಾರ ಫೋಟೋವನ್ನು ಹರಿದು ಕಾಲಿನಲ್ಲಿ ತುಳಿದು ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸುವAತೆ ಆಗ್ರಹಿಸಿ ಭಜರಂಗದಳ ಹಾಗೂ ಶ್ರೀರಾಮಸೇನೆ ಸಂಘಟನೆಗಳ ಮುಖಂಡರು ಅಪರ ಜಿಲ್ಲಾಧಿಕಾರಿ ಮಂಗಳ ರವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಭಜರಂಗದಳದ ಮುಖಂಡರಾದ ಬಾಲಾಜಿ ಮಾತನಾಡಿ ಬಂದ್‌ಗೆ ಕರೆ ನೀಡಿದ್ದವರಿಗೆ ಪೊಲೀಸ್ ಇಲಾಖೆ ಅನುಮತಿ ನೀಡುವಾಗಲೇ ಸಾರ್ವಜನಿಕರಿಗೆ, ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ತೊಂದರೆ ನೀಡಬಾರದು, ಬಲವಂತದ ಬಂದ್ ಮಾಡದಿರಲು ಸೂಚಿಸಿ ನೀಡಿದ್ದ ಸ್ಪಷ್ಟ ಆದೇಶವನ್ನು ಧಿಕ್ಕರಿಸಿ ಡಿಡಿಪಿಐ ಕಚೇರಿಗೆ ನುಗ್ಗಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿಸಿದರು.
ಪ್ರತಿಭಟನಾಕಾರರಾದ ಚಂದ್ರಮೌಳಿ, ನಗರಸಭೆ ಸದಸ್ಯ ಅಂಬರೀಷ್, ಪಂಡಿತ್ ಮುನಿವೆಂಕಟಪ್ಪ ಮತ್ತಿತರರು ಅಧಿಕಾರಿಗಳ ವಿರುದ್ದ ಕೂಗಾಡಿ, ಕೆಲಸಕ್ಕೆ ಬಾರದ ಶ್ರೀಕೃಷ್ಣನ ಸಂದೇಶದ ಗೀತಸಾರ ಏಕೆ ಹಾಕಿದ್ದೀರಿ ಎಂದು ಪ್ರಶ್ನಿಸಿ ಹರಿದು ಹಾಕಿದ್ದಲ್ಲದೇ ತುಳಿದು ಹಿಂದೂ ದೇವರಿಗೆ ಅಪಮಾನ ಮಾಡಿದ್ದಾರೆ ಎಂದು ದೂರಿದರು.
ಇದರಿಂದ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ, ಇದು ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಮಾಡಿರುವ ಕೃತ್ಯವಾಗಿದೆ. ಸಮಾಜದಲ್ಲಿನ ಶಾಂತಿ ಕದಡಲು ನಡೆಸಿರುವ ಷಡ್ಯಂತ್ರವಾಗಿದೆ ಎಂದು ತಿಳಿಸಿದರು.
ಹಿಂದೂ ದೇವರುಗಳಿಗೆ ಅಪಮಾನ ಮಾಡಿರುವ ಮತ್ತು ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳೀಗೆ ಧಕ್ಕೆ ತಂದಿರುವವರ ವಿರುದ್ದ ಕೂಡಲೇ ಕಾನೂನು ರೀತ್ಯ ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಭಜರಂಗದಳದ ಮುಖಂಡರಾದ ಬಾಬು, ಶ್ರೀಧರ್, ವಿಶ್ವನಾಥ್, ರವಿ, ಮಹೇಶ್, ಗೋಕುಲ್, ಮಂಜು, ಭವಾನಿ, ಗೋಪಿ ಮತ್ತಿತರರಿದ್ದರು.
ಚಿತ್ರ ೦೭ ಕೆ.ಎಲ್.ಆರ್. ೦೨ ; ಜ.೩ ರಂದು ನಡೆದ ಕೋಲಾರ ಬಂದ್ ಸಂದರ್ಭದಲ್ಲಿ ಡಿಡಿಪಿಐ ಕಚೇರಿಗೆ ನುಗ್ಗಿ ಅಲ್ಲಿ ಗೋಡೆಗೆ ಹಾಕಿದ್ದ ಶ್ರೀಕೃಷ್ಣನ ಭಗವದ್ಗೀತೆ ಸಂದೇಶದ ಗೀತ ಸಾರ ಫೋಟೋವನ್ನು ಹರಿದು ಕಾಲಿನಲ್ಲಿ ತುಳಿದು ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸುವAತೆ ಆಗ್ರಹಿಸಿ ಭಜರಂಗದಳ ಹಾಗೂ ಶ್ರೀರಾಮಸೇನೆ ಸಂಘಟನೆಗಳ ಮುಖಂಡರು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.