ನ್ಯೂಸ್

ಶ್ರೀಗಂಧ ರಕ್ಷಣಾ ವೇದಿಕೆ ಪದಾಧಿಕಾರಿಗಳ ನೇಮಕ

ತರೀಕೆರೆ: ಕಳೆದ 20 ವರ್ಷಗಳ ಹಿಂದೆ ಸ್ಥಾಪಿಸಿದ್ದ ಸಂಘಟನೆ ಪುನಃ ರಚನೆ ಮಾಡಲಾಗುತ್ತಿದೆ ಎಂದು ಶ್ರೀಗಂಧ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಟಿ.ಎನ್.ವಿಶುಕುಮಾರ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶ್ರೀಗಂಧ ರಕ್ಷಣಾ ವೇದಿಕೆ ತಾಲೂಕು ಶಾಖೆಗೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಿ ಮಾತನಾಡಿದ ಅವರು, ಶ್ರೀಗಂಧ ರಕ್ಷಣಾ ವೇದಿಕೆ ರಾಜ್ಯದ ಶ್ರೀಗಂಧ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡುತ್ತಿರುವುದು ಮಾತ್ರವಲ್ಲದೆ, ನಾಡಿನ ನೆಲ, ಜಲ, ಜ್ವಲಂತ ಸಮಸ್ಯೆ ವಿರುದ್ಧ ಹೋರಾಟ ಮಾಡುತ್ತಾ ಬಂದಿದೆ. ರಾಜ್ಯದೆಲ್ಲೆಡೆ ಕಾರ್ಯಾಗಾರ, ಪರಿಸರ ಜಾಗೃತಿ ಮೂಡಿಸಿ ಶ್ರೀಗಂಧ ರಕ್ಷಣೆ ಜತೆ ಬೆಳೆಗಾರರಿಗೆ ಉತ್ತೇಜನ ನೀಡುತ್ತಿದೆ ಎಂದರು.

ಆ.3ರಂದು ತಾಲೂಕಿನ ಕಲ್ಲತ್ತಿಗಿರಿಯ ಗಂಧದಗುಡಿ ಭಾಗದಲ್ಲಿ ಶ್ರೀಗಂಧ ರಕ್ಷಣಾ ವೇದಿಕೆ ತಾಲೂಕು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಏರ್ಪಡಿಸಲಾಗುತ್ತಿದ್ದು, ಅಂದು ಕಲ್ಲತ್ತಿಗಿರಿ ಸುತ್ತಮುತ್ತ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಶ್ರೀಗಂಧ ರಕ್ಷಣಾ ವೇದಿಕೆ ತಾಲೂಕು ಶಾಖೆ ಅಧ್ಯಕ್ಷರಾಗಿ ಆಯ್ಕೆಯಾದ ಟಿ.ಎಸ್.ಶ್ರೀನಿವಾಸ್, ಉಪಾಧ್ಯಕ್ಷ ಪ್ರತಾಪ್, ಪ್ರಧಾನ ಕಾರ್ಯದರ್ಶಿ ಬಿ.ಆರ್.ಕಿರಣ್‌ಕುಮಾರ್, ಖಜಾಂಚಿ ನವೀನ್‌ಕುಮಾರ್, ಸಹ ಕಾರ್ಯದರ್ಶಿ ಪಿನ್ನಿಪೌಲ್, ಲಿಂಗದಹಳ್ಳಿ ಹೋಬಳಿ ಅಧ್ಯಕ್ಷ ಎಸ್.ಮೂರ್ತಿ, ಉಪಾಧ್ಯಕ್ಷ ಎಂ.ಮಂಜಪ್ಪ ಮತ್ತಿತರರಿದ್ದರು.