ಮೂಡಿಗೆರೆ ಅರಣ್ಯ ಇಲಾಖೆಯಿಂದ ವಶಪಡಿಸಿಕೊಂಡ ಶ್ರೀಗಂಧ ಮತ್ತು ಬಂಧನಕ್ಕೊಳಗಾಗಿರುವ ಆರೋಪಿಗಳು. ಎಸಿಎಫ್ ಆಕರ್ಷ, ಆರ್‌ಎಫ್‌ಒ ಜಿ.ಮಂಜುನಾಥ್, ಡಿಆರ್‌ಎಫ್‌ಒ ಅಶ್ವಥ್, ಜೆ.ಜಿ.ಉಮೇಶ್, ಎ.ಎಸ್.ಸುರೇಶ್, ಸುಮಂತ್, ನವರಾಜ್ ಇದ್ದಾರೆ. 
ನ್ಯೂಸ್

ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರ ಬಂಧನ

ಮೂಡಿಗೆರೆ: ಬೈಕ್‌ನಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ಎಚ್.ಆರ್.ಮನ್ಸೂರ್ (48), ಹ್ಯಾಂಡ್‌ಪೋಸ್ಟ್ ನಿವಾಸಿ ಎಂ.ಕೆ.ಯೂಸೂಫ್ ಎಂಬುವವರನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು 15 ಸಾವಿರ ರೂ. ಮೌಲ್ಯದ 1.129 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ.

ಬುಧವಾರ ರಾತ್ರಿ ಹಂಡುಗುಳಿ ಸಮೀಪದ ನವಗ್ರಾಮದ ಬಳಿ ಬೈಕ್‌ನಲ್ಲಿ ಇಬ್ಬರು ಶ್ರೀಗಂಧ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳ ತಂಡ ಬೈಕ್ ಅನ್ನು ಬೆನ್ನಟ್ಟಿ ಹಿಡಿದು ಪರಿಶೀಲಿಸಿದಾಗ ಶ್ರೀಗಂಧದ 8 ತುಂಡುಗಳು ಪತ್ತೆಯಾಗಿವೆ. ಆರೋಪಿಗಳಿಬ್ಬರು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅವರನ್ನು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಜಿ.ಮಂಜುನಾಥ್, ಡಿಆರ್‌ಎಫ್‌ಒ ಅಶ್ವಥ್, ಸಿಬ್ಬಂದಿ ಜೆ.ಜಿ.ಉಮೇಶ್, ಎ.ಎಸ್.ಸುರೇಶ್, ಸುಮಂತ್ ನವರಾಜ್ ಇದ್ದರು.