ಸಂವಿಧಾನ ಜಾಗೃತಿ ರಥಯಾತ್ರೆ. 
ನ್ಯೂಸ್

ಸಂವಿಧಾನ ಪೀಠಿಕೆ ಶಿಲಾಫಲಕ ಉದ್ಘಾಟನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸಂವಿಧಾನ ಪೀಠಿಕೆ ಶಿಲಾಫಲಕ ಉದ್ಘಾಟನೆಯನ್ನು ಸೆಪ್ಟೆಂಬರ್ 20 ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪುರಭವನದ ಆವರಣದಲ್ಲಿ ಆಯೋಜಿಸಲಾಗಿದೆ.

 ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಣೆ ಮಾಡಲಿದ್ದು, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

 ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ., ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.

 ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್ ಅವರು ಆಗಮಿಸಲಿದ್ದಾರೆ.

 ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ., ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಹೆಚ್. ವಿಶ್ವನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ. ಮಾದೇಗೌಡ, ಡಾ. ಯತಿಂದ್ರ ಎಸ್, ವಿವೇಕಾನಂದ ಎಸ್, ಮತ್ತು ಶಿವಕುಮಾರ್ ಕೆ. ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

 ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಹಾಗೂ ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 ಸಮಾರಂಭದ ಆಹ್ವಾನಿತರಾಗಿ ಮೈಸೂರು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಮೇಜರ್ ಮಣಿಮಣ್ಣನ್, ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಮೈಸೂರು ಮಹಾನಗರ ಪಾಲಿಕೆ ಆಡಳಿತ ಅಧಿಕಾರಿಗಳಾದ ವೆಂಕಟ್ ರಾಜಾ, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ವಿಷ್ಣುವರ್ಧನ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್ ಅವರು ಭಾಗವಹಿಸಲಿದ್ದಾರೆ.