ನ್ಯೂಸ್

ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೆಸರು ಹೇಳಿ ಶಿರೊಳ್ಳಿ ರೈತ ಆತ್ಮಹತ್ಯೆ

ಕಲಬುರಗಿ: ಚಿಂಚೋಳಿ ತಾಲೂಕಿನ, ಸೇಡಂ ಕ್ಷೇತ್ರದ ಶಿರೊಳ್ಳಿ ಗ್ರಾಮದ ರೈತ ಶಿವಕುಮಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ನೇರ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಗಂಭೀರವಾಗಿ ಆರೋಪಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಅವರ ಸಂಬಂಧಿ ನರಸಪ್ಪ ಎನ್ನುವವರನ್ನು ಹಲ್ಲೆ ಮಾಡಿದ್ದಾರೆ. ಈ ಕುರಿತು ದೂರು ಕೊಡಲು ಹೋದಾಗ ದೂರು ಸ್ವೀಕರಿಸಿಲ್ಲ. ಕಾಂಗ್ರೆಸ್ ಸರ್ಕಾರದ ಕಿರುಕುಳ ತಾಳದೆ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಆಡಿಯೋ ಮಾಡಿ, ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಈ ಕುರಿತು ಸುಮೋಟೋ ಪ್ರಕರಣ ದಾಖಲಾಗಬೇಕು. ಸಿಓಡಿ ತನಿಖೆ ಮಾಡಬೇಕು. ರಾಜ್ಯದ ತನಿಖಾ ದಳಗಳಿಂದ ಆಗದಿದ್ದರೆ ಸಿ.ಬಿ.ಐ.ಗೆ ಶಿಫಾರಸ್ಸು ಮಾಡಿದರೆ ತನಿಖೆ ನಡೆಸಲಾಗುವುದು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ದೂರು ಕೊಟ್ಟರೇ ಸ್ವೀಕರಿಸುತ್ತಿಲ್ಲ. ಕೂಡಲೇ ಸಚಿವ ಡಾ.ಶರಣಪ್ರಕಾಶ ರಾಜೀನಾಮೆ ನೀಡಬೇಕು ಎಂದು ಸಂಸದ ಡಾ.ಉಮೇಶ್ ಜಾಧವ್ ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ.ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ಸಂತೋಷ ದೊಡ್ಡಮನಿ, ಅಂಬಾರಾಯ ಬೆಳಕೋಟೆ, ಸಂತೋಷ ದೊಡ್ಡಮನಿ, ಬಾಬುರಾವ್ ಹಾಗರಗುಂಡಗಿ ಇತರರಿದ್ದರು.