ವಿಜಯವಾಣಿ ಸುದ್ದಿಜಾಲ ಕೋಲಾರ
ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ನಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆ ನಿರ್ಮಾಣಕ್ಕೆ ಸಂಬAಧಿಸಿದAತೆ ವಿಸ್ತೃತ ಯೋಜನೆ ವರದಿಯನ್ನು ಸಿದ್ಧಪಡಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎಸ್ ಸುರೇಶ್ ತಿಳಿಸಿದರು.
ವಿಧಾನಮಂಡಲದ ಬಜೆಟ್ ಅಧಿವೇಶನದಲ್ಲಿ ಶುಕ್ರವಾರ ಕೆಜಿಎಫ್ ಶಾಸಕಿ ಡಾ. ರೂಪಕಲಾ. ಎಂ ಶಶಿಧರ್ ಅವರ ಚುಕ್ಕಿ ಗುರುತಿನ ಪ್ರಶ್ನೆಗೆ ಸುದೀರ್ಘವಾಗಿ ಉತ್ತರಿಸಿ ಮಾತನಾಡಿದರು.
ಕರ್ನಾಟಕದಲ್ಲಿ ಮೊತ್ತಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೪-೨೫ನೇ ಸಾಲಿನ ಆಯ-ವ್ಯಯ ಮಂಡನೆ ವೇಳೆ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೋಲಾರ ಚಿನ್ನದ ಗಣಿ ಪ್ರದೇಶ (ಕೆ.ಜಿ.ಎಫ್), ಬಳ್ಳಾರಿ ಮತ್ತು ತುಮಕೂರಿನ ವಸಂತ ನರಸಾಪುರದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣದ ಬಗ್ಗೆ ಘೋಷಿಸಿದ್ದಾರೆ.
ಅದರಂತೆ ಕೋಲಾರ ಜಿಲ್ಲೆಯ ಕೆ.ಜಿ.ಎಫ್ ಪಟ್ಟಣದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆ ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು, ಇದನ್ನು ಮತ್ತಷ್ಟು ಚುರುಕುಗೊಳಿಸಲು ಇದಕ್ಕೆ ಸಂಬAಧಿಸಿದAತೆ ಕಾರ್ಯ ಸಾಧ್ಯತೆಯ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.
ಕೆ.ಜಿ.ಎಫ್ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣಕ್ಕಾಗಿ ಬಿ.ಜಿ.ಎಂ.ಎಲ್ ಸುಪರ್ದಿಯಲ್ಲಿರುವ ರಾಜ್ಯ ಸರ್ಕಾರದ ಸುಮಾರು ೯೬೦ ಎಕರೆ ಜಮೀನು, ಇದರಲ್ಲಿ ಕೆ.ಜಿ.ಎಫ್ ತಾಲ್ಲೂಕಿನಲ್ಲಿ ಬಂಗಾರದ ಗಣಿ ಗ್ರಾಮದ ಸರ್ವೆ ನಂ. ೩ ರಲ್ಲಿ ೨೯೪ ಎಕರೆ ಜಾಗವನ್ನು ಗುರುತಿಸಲಾಗಿದೆ.
ಬಿ.ಇ.ಎಂ.ಎಲ್ ಸುಪರ್ದಿಯಲ್ಲಿದ್ದ ಕೆಲವು ಎಕರೆ ಜಾಗವನ್ನು ನಗರಾಭಿವೃದ್ಧಿ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಉಳಿದ ೬೦೦ ಎಕರೆ ಜಮೀನನ್ನು ಕೈಗಾರಿಕೆಗಳಿಗಾಗಿ ಪಡೆಯಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದರು.
ಚೆನೈ-ಬೆAಗಳೂರು ಎಕ್ಸ್ಪ್ರೆಸ್ ಹೆದ್ದಾರಿ ಕೆ.ಜಿ.ಎಫ್ ಮೂಲಕ ಹಾದು ಹೋಗಿದ್ದು, ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ ಮಾಡಲು ಉದ್ದೇಶಿಸಿರುವ ಜಾಗದಿಂದ ೨.೫ ಕಿ.ಮೀ ಅಂತರದಲ್ಲಿದೆ. ಎಕ್ಸ್ಪ್ರೇಸ್ ಹೆದ್ದಾರಿಯಿಂದ ಟೌನ್‌ಶಿಪ್‌ಗೆ ನೇರ ಸಂಪರ್ಕ ಕಲ್ಪಿಸಲು ಸಾಧ್ಯವೇ ಎಂಬುವುದನ್ನು ಪರಿಶೀಲಿಸಲಾಗುತ್ತಿದೆ ಎಂದರು
ಎಕ್ಸ್ಪ್ರೆಸ್ ಹೆದ್ದಾರಿಯ ಮೂಲಕ ಇಂಟಿಗ್ರೇಟೆಡ್ ಟೌನ್‌ಶಿಪ್‌ಗೆ ನೇರ ರಸ್ತೆ ಕಲ್ಪಿಸಲು ಸಾಧ್ಯವಾಗದಿದ್ದಲ್ಲಿ, ಸರ್ವಿಸ್ ರಸ್ತೆ, ಎತ್ತರಿಸಿದ ರಸ್ತೆ ಅಥವಾ ಮ್ಯಾಜಿಕ್ ಬಾಕ್ಸ್ ಮೂಲಕ ರಸ್ತೆ ನಿರ್ಮಾಣ ಮಾಡಲು ಸಾಧ್ಯವಿದೆಯೇ ಎನ್ನುವುದನ್ನು ಸಮೀಕ್ಷೆ ಮಾಡಿ ಅದಷ್ಟು ಬೇಗ ವರದಿ ನೀಡುವಂತೆ ಕೆ.ಜಿ.ಎಫ್ ನಗರ ಯೋಜನಾ ಪ್ರಾಧಿಕಾರದ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.
ಕೆ.ಜಿ.ಎಫ್ ನಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣ ಮಾಡಲು ತಗಲುವ ವೆಚ್ಚ ಎಷ್ಟಾಗುತ್ತದೆ ಎನ್ನುವುದರ ಬಗ್ಗೆ ವಿಸ್ತೃತ ವರದಿಯನ್ನು ನೀಡಲು ಮತ್ತು ಇಂಟಿಗ್ರೇಟೆಡ್ ಟೌನ್‌ಶಿಪ್ ನಿರ್ಮಾಣದ ಬಗ್ಗೆ ವಿಸ್ತೃತ ವರದಿಯನ್ನು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಮೂಲಕ ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ. ಇದಕ್ಕಾಗಿ ಖಾಸಗಿ ಕಂಪನಿಗಳನ್ನು ಆಹ್ವಾನಿಸಲು ಟೆಂಡರ್ ಕರೆಯಲು ಸಹ ತಿಳಿಸಲಾಗಿದೆ ಎಂದರು.
ವಸತಿ ಯೋಜನೆ, ಕೈಗಾರಿಕೆಗಳು, ಆರೋಗ್ಯ ಘಟಕಗಳು ಶೈಕ್ಷಣಿಕ ಸಂಸ್ಥೆಗಳು, ವಾಣಿಜ್ಯ ಮುಂಗಟ್ಟುಗಳು, ಬ್ಯಾಂಕ್‌ಗಳು, ಉದ್ಯಾನವನ, ಮನೋರಂಜನ ತಾಣಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡAತೆ, ಸದರಿ ಯೋಜನೆಯಿಂದಾಗಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಮತ್ತು ಉತ್ತಮ ವಸತಿ ಯೋಜನೆಯ ವಿಭಿನ್ನ ಹಾಗೂ ವಿಶಿಷ್ಟವಾದ ಇಂಟಿಗ್ರೇಟೆಡ್ ಟೌನ್‌ಶಿಪ್ ಅನ್ನು ಕೆ.ಜಿ.ಎಫ್ ನಲ್ಲಿ ನಿರ್ಮಾಣ ಮಾಡಲು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ ಎಂದರು.
ಖಾಸಗಿ ಸಹಭಾಗಿತ್ವ ದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಟೌನ್‌ಶಿಪ್ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ ಎಂದರು.
ಚಿತ್ರ ೧೪ ಕೆ.ಎಲ್.ಆರ್. ೦೪ : ಸಚಿವ ಬೈರತಿ ಸುರೇಶ್ ಭಾವಚಿತ್ರ
ಚಿತ್ರ ೧೪ ಕೆ.ಎಲ್.ಆರ್. ೦೪ : ರೂಪಕಲಾ ಎಂ.ಶಶಿಧರ್ ಭಾವಚಿತ್ರ