ನ್ಯೂಸ್

ಸಬಲೀಕರಣದಿಂದ ಅಸ್ಪೃಶ್ಯತೆ ನಿವಾರಣೆ-ಡಿಸಿ‌ ಡಾ.ಎಂ.ಆರ್.ರವಿ

ಚಾಮರಾಜನಗರ: ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಸಬಲರಾದರೆ ಜಾತಿ ಅಸ್ಪೃಶ್ಯತೆ ‌ಹೋಗಲಾಡಿಸಬಹುದು‌ ಎಂದು‌ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹೇಳಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಪ್ರಜಾ ಪರಿವರ್ತನಾ ವೇದಿಕೆ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ನಾಗರೀಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಮತ್ತು ಎಸ್ಸಿ, ಎಸ್ಟಿ(ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ಹಾಗೂ ನಿಯಮಗಳು 1995 ಕುರಿತ ವಿಚಾರ ಸಂಕಿರಣ ಮತ್ತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರಜಾ ಪರಿವರ್ತನಾ ವೇದಿಕೆಯ ಅಧ್ಯಕ್ಷ ಸಿ.ಎಂ.ಕೃಷ್ಣಮೂರ್ತಿ ಮಾತನಾಡಿ, ಕಾಯ್ದೆ ಬಗ್ಗೆ ಅರಿವು ಮೂಡಿಸಲು ಕೇಂದ್ರ‌ ಸರ್ಕಾರದಿಂದ ಅನುದಾನ ನೀಡಲಾಗುತ್ತದೆ. ಬೇರೆ ಜಿಲ್ಲೆಗಳಲ್ಲಿ ಅಸ್ಪೃಶ್ಯತಾ ದಿನ ಆಚರಣೆ ಮಾಡಲಾಗುತ್ತಿದೆ. ಕಾಯ್ದೆ ಬಗ್ಗೆ ಜನರಿಗೆ ತಿಳುವಳಿಕೆ ಮೂಡುತ್ತಿಲ್ಲ. ಇದರಿಂದಾಗಿ ಜನರು ಹಕ್ಕುಗಳನ್ನು ಸರಿಯಾಗಿ ಚಲಾಯಿಸುತ್ತಿಲ್ಲ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬೋಧಿದತ್ತ ಬಂತೇಜಿ, ಜ್ಞಾತ ಪ್ರಕಾಶ್ ಸ್ವಾಮೀಜಿ, ಗುರುಸ್ವಾಮಿ‌ ಇತರರಿದ್ದರು.