ಸೋಮವಾರಪೇಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಮ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕೃಷ್ಣಮೂರ್ತಿ ಬಾಬೂಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.ಜಯಂತಿ ಶಿವಕುಮಾರ್, ಆದಂ, ಸತೀಶ್ ಇದ್ದರು.  
ನ್ಯೂಸ್

ಸಮ ಸಮಾಜ ನಿರ್ಮಿಸಲು ಶ್ರಮಿಸಿದ ಬಾಬೂಜಿ

ಸೋಮವಾರಪೇಟೆ : ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಾಬು ಜಗಜೀವನರಾಮ್ ಅವರ ಜನ್ಮ ದಿನಾಚರಣೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆಯಿತು.

ಕಾರ್ಯಕ್ರಮವನ್ನು ತಹಸೀಲ್ದಾರ್ ಕೃಷ್ಣಮೂರ್ತಿ ಉದ್ಘಾಟಿಸಿದರು. ಸಮಾನತೆಯ ಸಮಾಜ ನಿರ್ಮಿಸಲು ಶ್ರಮಿಸಿದ ಮಹಾನ್ ಚೇತನ ಬಾಬು ಜಗಜೀವನರಾಮ್ ಶತಮಾನಗಳಿಂದ ಶೋಷಣೆಗೊಳಗಾದವರ ಬಾಳಿನ ಬೆಳಕಾಗಿದ್ದರು. ಅವರ ಆದರ್ಶಗಳನ್ನು ನಾವು ಪಾಲಿಸಬೇಕು ಎಂದರು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಶಿಕ್ಷಕ ಟಿ.ಎಚ್.ಸುಕುಮಾರ್ ಮಾತನಾಡಿ, ದುಡಿಯುವ ವರ್ಗದ ಹಿತಕ್ಕಾಗಿ ಶ್ರಮಿಸಿದ ಹಸಿರು ಕ್ರಾಂತಿಯ ಹರಿಕಾರ ಶೋಷಿತರ ಧ್ವನಿಯಾಗಿ, ರಾಜಕೀಯ ಮುತ್ಸದ್ದಿಯಾಗಿ ಅವರ ಬದುಕು ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕೆಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎ.ಆದಂ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸತೀಶ್, ಸಮಾಜ ಕಲ್ಯಾಣ ಇಲಾಖೆಯ ರಜನೀಕಾಂತ್, ಡೀಲಾಕ್ಷ ಮತ್ತಿತರರು ಇದ್ದರು.