ನ್ಯೂಸ್

ಸರ್‌ಎಂವಿ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಜುಡೋ ಬೇಸಿಗೆ ಶಿಬಿರಕ್ಕೆ ಚಾಲನೆ/ ಎರಡು ದಶಕಗಳ ಹೋರಾಟದ ಫಲ ಸಿಂಥೆಟಿಕ್ ಟ್ರಾö್ಯಕ್ ಸಿದ್ದ/ಕೆ.ಜಯದೇವ್

ವಿಜಯವಾಣಿ ಸುದ್ದಿಜಾಲ ಕೋಲಾರ

ಎರಡು ದಶಕಗಳ ಹೋರಾಟದ ಫಲವಾಗಿ ವಿಶ್ವೇಶ್ವರಯ್ಯ ಕ್ರೀಡಾಂಗಣ ಸಿಂಥೆಟಿಕ್ ಟ್ರಾ÷್ಯಕ್ ಆಗಿ ಮಾರ್ಪಟ್ಟಿದ್ದುö, ಯುವ ಕ್ರೀಡಾಪಟುಗಳು ಕ್ರೀಡಾಂಗಣವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ಯಾರಾ ಒಲಂಪಿಕ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಕೆ.ಜಯದೇವ್ ತಿಳಿಸಿದರು.

ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬುಧವಾರ ಬೆಳಿಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ಅಥ್ಲೆಟಿಕ್ಸ್ ಹಾಗೂ ಜುಡೋ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡಾಪಟುಗಳ ಒತ್ತಾಸೆಯ ಹೋರಾಟದಿಂದಾಗಿ ಸುಸಜ್ಜಿತವಾಗಿ ಕ್ರೀಡಾಂಗಣ ರೂಪುಗೊಂಡಿದ್ದುö, ಇದೇ ಕ್ರೀಡಾಂಗಣದಲ್ಲಿ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ರಾಷ್ಟಿçÃಯ ಮಟ್ಟದ ಕ್ರೀಡಾಕೂಟವೊಂದನ್ನು ಆಯೋಜಿಸಲು ಸಿದ್ಧತೆ ನಡೆಸಿದ್ದುö, ಎಲ್ಲಾ ಕ್ರೀಡಾಪಟುಗಳು ಸಹಕಾರ ನೀಡಬೇಕೆಂದು ಕೋರಿದರು.

ಯುವ ಪೀಳಿಗೆಯ ವಿದ್ಯಾರ್ಥಿಗಳು ಬೇಸಿಗೆ ಶಿಬಿರವನ್ನು ಸದುಪಯೋಗಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಕ್ರೀಡೆಯಲ್ಲಿ ರಾಷ್ಟಿçÃöಯ ಅಂತಾರಾಷ್ಟಿçÃಯ ಮಟ್ಟದಲ್ಲಿ ಕೀರ್ತಿ ತರುವ ಕ್ರೀಡಾಪಟುಗಳಾಗಿ ರೂಪುಗೊಳ್ಳಬೇಕು ಎಂದು ಆಶಿಸಿದರು.

ಯುವ ಸಬಲೀಕರಣ ಕ್ರೀಡಾ ಇಲಾಖೆಯು ಪ್ರತಿಯೊಂದು ಶಾಲೆಯಲ್ಲಿಯೂ ಬೇಸಿಗೆ ಶಿಬಿರ ಕುರಿತು ಮಾಹಿತಿ ನೀಡಿ ಹೆಚ್ಚಿನ ಮಕ್ಕಳು ಶಿಬಿರಕ್ಕೆ ಬರುವಂತೆ ಮಾಡಬೇಕೆಂದು ಸಲಹೆ ನೀಡಿದರು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ಮಾತನಾಡಿ, ಯುವ ಪೀಳಿಗೆಯಲ್ಲಿ ಉತ್ತಮ ಅಥ್ಲೆಟಿಕ್ಸ್ ಹಾಗೂ ಜುಡೋ ಕ್ರೀಡಾಪಟುಗಳನ್ನು ತಯಾರು ಮಾಡುವ ಗುರಿ ಇಟ್ಟುಕೊಂಡು ಇಲಾಖೆಯು ಸಂಪೂರ್ಣ ಉಚಿತವಾಗಿ ಅಥ್ಲೆಟಿಕ್ಸ್ ಹಾಗೂ ಜುಡೋ ಬೇಸಿಗೆ ಶಿಬಿರವನ್ನು ಆರಂಭಿಸಿದ್ದುö, ಎರಡು ಹಂತಗಳ ಈ ಶಿಬಿರದಲ್ಲಿ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.

ಮೊದಲ ಹಂತದ ಶಿಬಿರವು ಏ.೨ ರಿಂದ ಮೇ.೧ ರವರೆವಿಗೂ ಹಾಗೂ ಎರಡನೇ ಹಂತದ ಶಿಬಿರವು ಮೇ.೨ ರಿಂದ ೨೬ ರವರೆವಿಗೂ ನಡೆಯಲಿದೆ, ಅಥ್ಲೆಟಿಕ್ಸ್ನಲ್ಲಿ ೧೦ ರಿಂದ ೧೬ ವಯೋಮಾನ ಹಾಗೂ ಜುಡೋಗೆ ೧೦ ರಿಂದ ೨೧ ವಯೋಮಾನದವರು ಭಾಗವಹಿಸಲು ಅವಕಾಶವಿದೆ, ಇದು ಸಂಪೂರ ಉಚಿತ ಬೇಸಿಗೆ ಶಿಬಿರವಾಗಿದೆ ಎಂದು ತಿಳಿಸಿದರು.

ಹಿರಿಯ ಕ್ರೀಡಾ ತರಬೇತುದಾರ ಜಗನ್ ಮಾತನಾಡಿ, ವಿದ್ಯಾರ್ಥಿಗಳು ವ್ಯಾಸಾಂಗದ ಜೊತೆ ಕ್ರೀಡೆಯನ್ನು ನಿಯಮಿತವಾಗಿ ಅಭ್ಯಾಸ ಮಾಡಿದರೆ ಉದ್ಯೋಗ ಗಿಟ್ಟಿಸಿಕೊಳ್ಳುವುದರ ಜೊತೆಗೆ, ಜೀವನ ಪೂರ್ತಿ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವೆಂದರು.

ವಾಕಿAಗ್ ಗೆಳೆಯರ ಬಳಗದ ಅಧ್ಯಕ್ಷ ದೇವರಾಜ್ ಮಾತನಾಡಿ, ಬೇಸಿಗೆ ಶಿಬಿರಕ್ಕೆ ತಮ್ಮ ಬಳಗದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ವಾಕಿಂಗ್ ಗೆಳೆಯರ ಬಳಗದ ವೆಂಕಟಶಿವಪ್ಪ, ಕ್ರೀಡಾಪಟು ರಾಜೇಶ್, ಪತ್ರಕರ್ತ ಕೆ.ಎಸ್.ಗಣೇಶ್,

ಶಿಬಿರದಲ್ಲಿ ಹಿರಿಯ ಕ್ರೀಡಾಪಟು ಗೌಸ್‌ಖಾನ್, ಹಾಬಿ ರಮೇಶ್, ವಾಕಿಂಗ್ ಗೆಳೆಯರಾದ ರಾಜಣ್ಣö, ಅಮರನಾರಾಯಣ ಇತರರು ಹಾಜರಿದ್ದುö, ಶಿಬಿರಾರ್ಥಿಗಳಿಗೆ ಸಮವಸ್ತçಗಳನ್ನು ವಿತರಿಸಿದರು.

ಚಿತ್ರ ೧೬ ಕೆ.ಎಲ್.ಆರ್. ೦೧ ಕೋಲಾರ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಯುಬ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಆಯೋಜಿಸಿರುವ ಅಥ್ಲೆಟಿಕ್ಸ್ ಹಾಗೂ ಜುಡೋ ಬೇಸಿಗೆ ಶಿಬಿರಕ್ಕೆ ಹಿರಿಯ ಕ್ರೀಡಾಪಟು ಕೆ.ಜಯದೇವ್ ಮತ್ತು ಇಲಾಖೆಯ ಉಪ ನಿರ್ದೇಶಕಿ ಗೀತಾ ಇತರರು ಚಾಲನೆ ನೀಡಿದರು.