ಎನ್.ಆರ್.ಪುರ: ಯಾವುದೇ ಪ್ರತಿಲಾಪೇಕ್ಷೆಯಿಲ್ಲದೆ ಮಾಡುವ ಸೇವೆಯೇ ನಿಜವಾದ ನಿಸ್ವಾರ್ಥ ಸೇವೆ. ಇಂತಹ ಸೇವೆ ಮನಸ್ಸಿಗೆ ಸಂತೋಷ ನೀಡುತ್ತದೆ ಮತ್ತು ಮಾಡಿದ ಪುಣ್ಯ ನಮ್ಮನ್ನು ಕಾಪಾಡುತ್ತದೆ ಎಂದು ಜಿನಿ ವಿಶ್ವನಾಥ್ ಸೇವಾ ಕೇಂದ್ರದ ಅಧ್ಯಕ್ಷೆ ಜಿನಿ ವಿಶ್ವನಾಥ್ ಹೇಳಿದರು.
ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷಾ ಸಾಧನಗಳನ್ನು ಒಳಗೊಂಡ ಎಮರ್ಜೆನ್ಸಿ ಕಿಟ್ ವಿತರಣೆ ಅವರು ಮಾತನಾಡಿ, ಎನ್.ಆರ್.ಪುರದಲ್ಲಿ ಜಿನಿ ವಿಶ್ವನಾಥ್ ಸೇವಾ ಕೇಂದ್ರ ಸ್ಥಾಪನೆಯಾಗಿದೆ. ಶೃಂಗೇರಿ ಕ್ಷೇತ್ರದಾದ್ಯಂತ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಆರ್ಥಿಕ ಹಿಂದುಳಿದವರಿಗೆ ಅನೇಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಡಳಿತ ವೈದ್ಯಾಧಿಕಾರಿ ಡಾ. ಕೆ.ಒ.ನರಸಿಂಹಮೂರ್ತಿ ಹಾಗೂ ವೈದ್ಯರೊಂದಿಗೆ ಚರ್ಚಿಸಿ ಅಗತ್ಯ ಚಿಕಿತ್ಸಾ ಪರಿಕರಗಳನ್ನು ನೀಡಲಾಗಿದೆ. ಮೂತ್ರಪಿಂಡ ರೋಗದಿಂದ ಬಳಲುತ್ತಿದ್ದ ರೋಗಿಗೆ ಕೈಲಾದ ಸಹಾಯಧನವನ್ನು ಕೂಡ ನೀಡಲಾಗಿದೆ. ಪ್ರಮುಖವಾಗಿ ಸರ್ಕಾರಿ ಶಾಲೆ ಮಕ್ಕಳಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಪಿ.ಜೆ.ಆ್ಯಂಟೋನಿ, ಎಂ.ಪಿ.ಸನ್ನಿ, ರೀನಾ ಬೆನ್ನಿ, ಪ್ರೇಮಾ ಶ್ರೀನಿವಾಸ್, ವಿಜು ಮಾಕೋಡು, ಪಿ.ಸಿಜು, ಚೇತನ್ ಇದ್ದರು.