ನ್ಯೂಸ್

ಸರ್ಕಾರಿ ಬಾಲಕಿಯ ಪಿಯು ಕಾಲೇಜಿಗೆ ಶೌಚಾಲಯ ನಿರ್ಮಾಣ ಮತ್ತು ಕ್ಯಾಂಟೀನ್ ನಿರ್ಮಾಣಕ್ಕೆ ಸ್ವಂತ ಹಣ ನೀಡಲಾಗುವುದು / ಶಾಸಕ ಕೊತ್ತೂರು ಮಂಜುನಾಥ್

ವಿಜಯವಾಣಿ ಸುದ್ದಿಜಾಲ ಕೋಲಾರ

ಸರ್ಕಾರಿ ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಉತ್ತಮ ವಾತಾವರಣವನ್ನು ಕಲ್ಪಿಸಿಕೊಡಲು ಜಿಲ್ಲೆಯಲ್ಲಿರುವ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಸಿದ್ದರಿದ್ದೇವೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರದ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಶನಿವಾರ ೯೬ ಲಕ್ಷದ ವೆಚ್ಚದ ನಾಲ್ಕು ಕೊಠಡಿಗಳಿಗೆ ಗುದ್ದಲಿ ಪೂಜೆ ಹಾಗೂ ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕಾಲೇಜು ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಈಗಾಗಲೇ ಕಾಲೇಜಿನಲ್ಲಿ ಸಿಬ್ಬಂದಿಗೆ ಶೌಚಾಲಯ ಕಟ್ಟಡ ನಿರ್ಮಾಣ ಹಾಗೂ ವಿಧ್ಯಾರ್ಥಿಗಳಿಗೆ ಕ್ಯಾಂಟೀನ್ ಸೌಲಭ್ಯಕ್ಕೆ ಕೋರಿದ್ದು, ಕೂಡಲೇ ಸ್ವಂತ ಹಣ ಕೊಡಲು ನಾವು ಸಿದ್ದರಿದ್ದೇವೆ. ಮೂಲಭೂತ ಸೌಕರ್ಯಗಳು ಕೊಡಲು ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಬೆಂಬಲ ಇರುತ್ತದೆ ಎಂದರು.

ಎAಎಲ್ಸಿ ಅನಿಲ್ ಕುಮಾರ್ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿರುವ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಸುಮಾರು ೬೦೦ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೂ ಉಪನ್ಯಾಸಕರು ಮತ್ತು ಸಿಬ್ಬಂದಿಗಳಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ವಿವಿಧ ಯೋಜನೆಯಡಿಯಲ್ಲಿ ಅನುದಾನವನ್ನು ನೀಡಲಾಗಿದೆ. ಜೊತೆಗೆ ಕಾಲೇಜುಗಳ ಅಭಿವೃದ್ದಿಗೆ ಒತ್ತು ನೀಡಲಾಗಿದೆ. ಸರ್ಕಾರಿ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಮಾತ್ರವೇ ಗುಣಮಟ್ಟದ ಶಿಕ್ಷಣವು ದೊರೆಯುತ್ತದೆ. ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ಮುಂದೆ ಇದ್ದಾರೆ. ಅದೇ ರೀತಿಯಲ್ಲಿ ನೀವು ಸಹ ಉನ್ನತ ಹುದ್ದೆಗಳನ್ನು ಪಡೆಯಬೇಕು ಎಂದರು

ಎAಎಲ್ಸಿ ಇಂಚರ ಗೋವಿಂದರಾಜು ಮಾತನಾಡಿ, ನಾನು ಪ್ರತಿ ವರ್ಷ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪ್ರತಿಭಾ ಪುರಸ್ಕಾರವನ್ನು ವೈಯಕ್ತಿಕವಾಗಿ ನೀಡಲಾಗುತ್ತಿದೆ. ಈ ಬಾರಿಯು ಈ ಕಾಲೇಜಿನಲ್ಲಿ ಪ್ರಥಮ ರ‍್ಯಾಂಕ್ ಹತ್ತರ ಒಳಗೆ ಬಂದವರಿಗೆ ೨೫ ಸಾವಿರ ನೀಡಲಾಗುತ್ತದೆ. ಎಲ್ಲರೂ ಇಂತಹ ಅವಕಾಶವನ್ನು ಪಡೆದುಕೊಂಡು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ಮೈಲಾಂಡಹಳ್ಳಿ ಮುರಳಿ, ಸದಸ್ಯ ಅಫ್ಸರ್, ಪ್ರಾಂಶುಪಾಲ ಎಂ ಬಾಲಕೃಷ್ಣ, ನಿವೃತ್ತ ಜಂಟಿ ನಿರ್ದೇಶಕ ವೆಂಕಟೇಶಪ್ಪ ಮುಖಂಡ ಚಿನ್ನಾಪುರ ನಾರಾಯಣಸ್ವಾಮಿ, ಯಲವಾರ ರಾಜಕುಮಾರ್ ಇದ್ದರು.

ಚಿತ್ರ ೦೧ ಕೆ.ಎಲ್.ಆರ್. ೦೩ : ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಕೊತ್ತೂರು ಮಂಜುನಾಥ್ ರಿಂದ ಗುದ್ದಲಿ ಪೂಜೆ. ಎಂ.ಎಲ್.ಸಿ.ಗಳಾದ ಇಂಚರ ಗೋವಿಂದರಾಜು, ಎಂ.ಎಲ್.ಅನಿಲ್‌ಕುಮಾರ್ ಇದ್ದರು.