ನ್ಯೂಸ್

ಸರ್ಕಾರಿ ಶಾಲೆಯ ದಾಖಲಾತಿ ಹೆಚ್ಚಿಸಲು ಹೊಸ ಪ್ರಯೋಗ/ ಮಕ್ಕಳಿಗೆ ೫೦೦೦ ರೂಗಳನ್ನು ಠೇವಣಿ ಬಾಂಡ್ ವಿತರಣೆ

ವಿಜಯವಾಣಿ ಸುದ್ದಿಜಾಲ ಕೋಲಾರ

ವಿದ್ಯಾರ್ಥಿಗಳು ದಾನಿಗಳು ನೀಡುವ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಸ್ಥಾನಕ್ಕೇರುವ ಮೂಲಕ ಪೋಷಕರಿಗೆ, ಗುರುಗಳಿಗೆ ಕೀರ್ತಿ ತರಬೇಕೆಂದು ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿ.ಮುನಿರಾಜು ತಿಳಿಸಿದರು.

ತಾಲೂಕಿನ ವಡಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳಿಂದ ಸಂಗ್ರಹಿಸಿದ ಹಣವನ್ನು ಹೊಸದಾಗಿ ದಾಖಲಾದ ಮಕ್ಕಳಿಗೆ ತಲಾ ೫೦೦೦ ರೂಗಳಂತೆ ಬ್ಯಾಂಕಿನಲ್ಲಿ ಠೇವಣಿ ಇರಿಸಿದ ಹಣ ಬಾಂಡ್ ವಿತರಣಾ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.

ಮಕ್ಕಳು ಪೋಷಕರ ಕಷ್ಟಗಳನ್ನು ಅರಿತು ಜೀವನದಲ್ಲಿ ಗುರಿಯನ್ನು ಇರಿಸಿಕೊಂಡು ವಿದ್ಯಾಭ್ಯಾಸ ಮಾಡಬೇಕು, ಸಾಧಿಸುವ ಛಲವನ್ನು ಮೈಗೂಡಿಸಿಕೊಂಡು ಗುರಿ ಸಾಧನೆಯತ್ತ ಮುನ್ನುಗ್ಗಬೇಕೆಂದು ಕಿವಿ ಮಾತು ಹೇಳಿದರು.

ಮುಖಂಡ ಡಿ.ಎಲ್.ನಾಗರಾಜ್ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ದಾಖಲಾಗುವ ಪ್ರತಿ ಮಗುವಿಗೂ ೧೦೦೮ ರೂ ಬಾಂಡ್ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಊರುಬಾಗಿಲು ರಮೇಶ್, ಗ್ರಾಮ ಪಂಚಾಯತಿ ಸದಸ್ಯ ಸೋಮಶೇಖರ್, ಎನ್.ವಿ.ರಮೇಶ್, ಎಸ್.ಡಿ.ಎಂ.ಸಿ.ಅಧ್ಯಕ್ಷ ಶಿವಪ್ರಕಾಶ್, ತಿಮ್ಮಸಂದ್ರ ಗ್ರಾಮದ ಗೋಪಾಲಪ್ಪ, ಮುಖ್ಯ ಶಿಕ್ಷಕ ಚಂದ್ರಪ್ಪ, ಸಿ.ಆರ್.ಪಿ.ರಶ್ಮಿ, ಸಹ ಶಿಕ್ಷಕಿ ಸರೋಜಮ್ಮ, ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು, ಪೋಷಕರು ಉಪಸ್ಥಿತರಿದ್ದರು.

ಚಿತ್ರ ೦೫ ಕೆ.ಎಲ್.ಆರ್. ೦೧ ತಾಲೂಕಿನ ವಡಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳಿಂದ ಸಂಗ್ರಹಿಸಿದ ಹಣವನ್ನು ಹೊಸದಾಗಿ ದಾಖಲಾದ ಮಕ್ಕಳಿಗೆ ತಲಾ ೫೦೦೦ ರೂಗಳಂತೆ ಬ್ಯಾಂಕಿನಲ್ಲಿ ಠೇವಣಿ ಇರಿಸಿದ ಹಣ ಬಾಂಡ್ ವಿತರಣಾ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿ.ಮುನಿರಾಜು, ಮುಖಂಡ ಡಿ.ಎಲ್.ನಾಗರಾಜ್ ಮುಂತಾದವರಿದ್ದರು.