ಕೆ.ಎಂ.ದೊಡ್ಡಿ: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಭಾರತೀ ಎಜುಕೇಷನ್ ಟ್ರಸ್ಟ್ ಸದಸ್ಯ ಮತ್ತು ಮನ್ಮುಲ್ ಮಾಜಿ ಅಧ್ಯಕ್ಷ ಕಾರ್ಕಹಳ್ಳಿ ಬಸವೇಗೌಡ ಅವರಿಗೆ ರಾಜ್ಯ ಸರ್ಕಾರದ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ.
ಕಾರ್ಕಹಳ್ಳಿ ಬಸವೇಗೌಡ ಅವರು ಅಣ್ಣೂರು ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಕಾರ್ಕಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಮನ್ಮುಲ್ ನಿರ್ದೇಶಕರಾಗಿ ನಂತರ ಅಧ್ಯಕ್ಷರಾಗಿಯೂ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ.
25 ವರ್ಷಗಳಿಂದಲೂ ಬಸವೇಗೌಡ ಅವರು ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ಇದನ್ನು ಪರಿಗಣಿಸಿ ರಾಜ್ಯ ಸರ್ಕಾರ ಸಹಕಾರ ರತ್ನ ಪ್ರಶಸ್ತಿ ಆಯ್ಕೆ ಮಾಡಿದೆ. ನ.20 ರಂದು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯುವ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು.