ನ್ಯೂಸ್

ಸಹಪಠ್ಯ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಿ

ಬೆಟ್ಟದಪುರ: ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್‌ನಂತಹ ಚಟುವಟಿಕೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿಯಾಗಿವೆ ಎಂದು ಶಾಸಕ ಕೆ. ಮಹದೇವ್ ಅಭಿಪ್ರಾಯಪಟ್ಟರು.

ಬೆಟ್ಟದಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಕ್ರೀಡೆ, ಸಾಂಸ್ಕೃತಿಕ, ರೆಡ್‌ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಓದಿನ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.

ಶಿಕ್ಷಣ ತಜ್ಞ ಟಿ.ಸಿ. ವಸಂತರಾಜ್ ಅರಸ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನಲ್ಲಿ ಆಯೋಜಿಸಿ ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಅಂತಾರಾಷ್ಟ್ರೀಯ ಜಾನಪದ ಗಾಯಕ ಅಮ್ಮ ರಾಮಚಂದ್ರ ಜಾನಪದ ಕಾರ್ಯಕ್ರಮ ನಡೆಸಿಕೊಟ್ಟರು.

ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕ ಡಾ.ಎಸ್.ಬಿ. ಅಪ್ಪಾಜಿಗೌಡ, ಪ್ರಾಂಶುಪಾಲ ಚೈತ್ರಾ, ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮುಖಂಡರಾದ ಮಲ್ಲಿಕಾರ್ಜುನ್, ರಾಜೇಗೌಡ, ಪ್ರೀತಿ ಅರಸ್, ಉಪನ್ಯಾಸಕರಾದ ಶಿಲ್ಪಶ್ರೀ, ಜಗದೀಶ್, ರೂಪಾ, ರಾಜೇಶ್, ಧನರಾಜ್ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.