ವಿಜಯವಾಣಿ ಸುದ್ದಿಜಾಲ ಕೋಲಾರ
ಕೇಂದ್ರ ಸರ್ಕಾರದ ಆಯ್ದ ಯೋಜನೆಗಳ ಸಾಮಾಜಿಕ ಪರಿಶೋಧನಾ ಪ್ರಕ್ರಿಯೆ ಮಾಡಲು ಸಂಬAಧಪಟ್ಟ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಕೋಲಾರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ನವದೆಹಲಿ, ಸಾಮಾಜಿಕ ಪರಿಶೋಧನೆ ನಿರ್ದೇಶನಾಲಯ ಬೆಂಗಳೂರು, ಸಮಾಜ ಕಲ್ಯಾಣ ಇಲಾಖೆ ಕೋಲಾರ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾ ಮಟ್ಟದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯಕ್ರಮಗಳ ಕುರಿತು ಮಾತನಾಡಿದರು.
ಸಮಾಜದಲ್ಲಿರುವ ಎಲ್ಲಾ ರೀತಿಯ ಅಸಮಾನತೆಯನ್ನು ಹೋಗಲಾಡಿಸಿ ಹಿಂದುಳಿದವರ, ಬಡವರ, ದುರ್ಬಲರು, ತುಳಿತಕ್ಕೆ ಮತ್ತು ಶೋಷಣೆಗೆ ಒಳಪಟ್ಟ ಅಸಹಾಯಕರನ್ನು ರಾಜಕೀಯವಾಗಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮೇಲಕ್ಕೆತ್ತಲು ಶಾಸನಗಳ ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನು ರೂಪಿಸಿ ಅವುಗಳನ್ನು ಜಾರಿಗೊಳಿಸುವುದು ಹಾಗೂ ಸಂವಿಧಾನದ ಪ್ರಸ್ತಾವನೆಯಲ್ಲಿ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ ಆರ್ಥಿಕ ಹಾಗೂ ರಾಜಕೀಯ ನ್ಯಾಯ ದೊರಕಿಸುವುದಾಗಿ ಸ್ಪಷ್ಟಪಡಿಸಿದರು.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಭಾರತ ಸರ್ಕಾರದ ಸಚಿವಾಲಯವಾಗಿದೆ. ಪರಿಶಿಷ್ಟ ಜಾತಿ ಇತರ ಹಿಂದುಳಿದ ವರ್ಗಗಳು, ಅಂಗವಿಕಲರು, ವೃದ್ಧರು ಮತ್ತು ಮಾದಕ ದ್ರವ್ಯ ಸೇವನೆಯ ವ್ಯಸನಿಗಳು ಸೇರಿದಂತೆ ಸಮಾಜದ ಹಿಂದುಳಿದ ಮತ್ತು ಅಂಚಿನಲ್ಲಿರುವ ವರ್ಗಗಳ ಅಭಿವೃದ್ಧಿ ಈ ಸಚಿವಲಯದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಬಾಬು ಜಗಜೀವನ್ ರಾಮ್ ಚಿತ್ರ ನಿವಾಸ್ :
ಮಾಲೂರು ನಗರದಲ್ಲಿ ಬಾಬು ಜಗಜೀವನ್ ರಾಮ್ ಚಿತ್ರ ನಿವಾಸ್ ಯೋಜನೆ ಅಡಿಯಲ್ಲಿ ಸರ್ಕಾರಿ ಸಾರ್ವಜನಿಕ ಬಾಲಕಿಯರ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲು ಸಾಮಾಜಿಕ ಪರಿಶೋಧನಾ ಇಲಾಖೆ ವತಿಯಿಂದ ಅನುದಾನ ಬಿಡುಗಡೆಯಾಗಿದ್ದು, ನಗರದಲ್ಲಿ ೨೦ ಗುಂಟೆ ಜಮೀನು ಗುರುತಿಸಿದ್ದು, ಕೆಲಸವನ್ನು ಪ್ರಾರಂಭಿಸುವುದಾಗಿ ತಿಳಿಸಿದರು.
ಹಿರಿಯ ನಾಗರಿಕ ವಿಶ್ರಾಂತಿ ಗೃಹ :
ಜಿಲ್ಲೆಯ ಕೆಜಿಎಫ್ ತಾಲೂಕಿನ ಪಾರಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ರಮಣ ಅಭಯ ಆಶ್ರಮ, ಶ್ರೀ ರಮಣ ಮಹರ್ಷಿ ಟ್ರಸ್ಟ್ ಇವರು ನೇರವಾಗಿ ಕೇಂದ್ರ ಸರ್ಕಾರದ ಅನುದಾನವನ್ನು ಪಡೆದುಕೊಂಡು ವೃದ್ಧಾಶ್ರಭವನ್ನು ನಡೆಸುತ್ತಿದ್ದು, ಇದುವರೆಗೆ ೩ ವರ್ಷಗಳಲ್ಲಿ
೯೫,೮೫,೪೮೯ ರೂ.ಗಳಷ್ಟು ಅನುದಾನ ಪಡೆದಿದ್ದು, ಸಾಮಾಜಿಕ ಪರಿಶೋಧನೆಯಲ್ಲಿ ಕಂಡುಬAದ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳನ್ನು ದಾಖಲಿಸಿರುವುದಾಗಿ ತಿಳಿಸಿದರು.
ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ :
೨೦೨೨ ಮತ್ತು ೨೩ನೇ ಸಾಲಿನಲ್ಲಿ ಕೋಲಾರ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಗೆ ೫ ತಾಲೂಕುಗಳ ೨೦ ಗ್ರಾಮಗಳು ಆಯ್ಕೆ ಆಗರುತ್ತವೆ. ಸದರಿ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿರುತ್ತದೆ ಎಂದು ತಿಳಿಸಿದರು.
ಮಧ್ಯ ಮತ್ತು ಮಾದಕ ವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರ :
ಮಧ್ಯ ಮತ್ತು ಮಾದಕ ವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರ ರಾಬರ್ಟ್ಸನ್ ಪೇಟೆ ಕೆಜಿಎಫ್‌ನಲ್ಲಿ ನಡೆಸುತ್ತಿದ್ದು, ಇದನ್ನು ನಿರ್ವಹಿಸಲು ಮೂರು ವರ್ಷಗಳಲ್ಲಿ ಒಟ್ಟು ೮೯,೦೭,೮೧೭ ರೂ.ಗಳಷ್ಟು ಅನುದಾನ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿದೆ. ಮಧ್ಯ ಮತ್ತು ಮಾದಕ ವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರಕ್ಕೆ ಪ್ರತಿ ತಿಂಗಳು ೧೫ ಫಲಾನುಭವಿಗಳನ್ನು ದಾಖಲು ಮಾಡಿಕೊಂಡು ಅವರನ್ನು ನಶೆ ಮುಕ್ತರನ್ನಾಗಿ ಮಾಡಿ ಒಂದು ತಿಂಗಳ ಒಳಗಾಗಿ ಮನೆಗಳಿಗೆ ಹಿಂತಿರುಗಿಸುವ ಕೆಲಸವನ್ನು ಮಾಡುತ್ತಿದ್ದು, ಪುನರ್ವಸತಿ ಕೇಂದ್ರದ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ವ್ಯಸನಮುಕ್ತ, ನಶೆಮುಕ್ತ ಕೋಲಾರ ಜಿಲ್ಲೆಯನ್ನು ಮಾಡಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಾರಾಯಣಸ್ವಾಮಿ, ಜಿಲ್ಲಾ ವಿಕಲಚೇನತರ ಮತ್ತು ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಮಂಜುಳ, ಸಾಮಾಜಿಕ ಪರಿಶೋಧನಾ ಸಚಿವಾಲಯದ ಉಪ ನಿರ್ದೇಶಕರಾದ ಸಂಜೀವ್ ಕುಮಾರ್, ರಾಜ್ಯ ಯೋಜನಾಧಿಕಾರಿ ನರಸರೆಡ್ಡಿ, ಜಿಲ್ಲಾ ಯೋಜನಾ ವ್ಯವಸ್ಥಾಪಾರಾದ ಬೀರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ ೧೧ ಕೆ.ಎಲ್.ಆರ್. ೦೩ : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾ ಮಟ್ಟದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯಕ್ರಮಗಳ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ಮುಂತಾದವರು ಇದ್ದರು.