ಚಾಮರಾಜನಗರ: ತಿಂಗಳು ಬೆಳಕು ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಹಿತ್ಯಲೋಕದ ಅವಲೋಕನ ಮಾಡಲಾಯಿತು.
ನಗರದ ಜೆಎಸ್ಎಸ್ ಸಭಾಂಗಣದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಜೆಎಸ್ಎಸ್ ಮಹಿಳಾ ಕಾಲೇಜು ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ತಿಂಗಳ ಬೆಳಕು ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಪ್ರೊ. ಮಲೆಯೂರು ಗುರುಸ್ವಾಮಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ, ಪ್ರಾಂಶುಪಾಲ ಎ. ಜಿ.ಶಿವಕುಮಾರ್, ಕನ್ನಡ ಪ್ರಾಧ್ಯಾಪಕ ವಿವಿ ವರಪ್ರಸಾದ್ ಇತರರು ಉಪಸ್ಥಿತರಿದ್ದರು.