ನ್ಯೂಸ್

ಸಿ.ಪಿ.ಯೋಗೇಶ್ವರ್ ನಮ್ಮ ಪಕ್ಷಕ್ಕೆ ಬಂದಿರುವುದು ಸಂತೋಷ

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನಮ್ಮ ಪಕ್ಷಕ್ಕೆ ಬಂದಿರುವುದು ಸಂತೋಷದ ವಿಚಾರ. ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಮ್ಮ ಪಕ್ಷದಲ್ಲೂ ಬಹಳಷ್ಟು ಜನ ಅಭ್ಯರ್ಥಿಗಳಿದ್ದರು. ಆದರೂ ಬೇರೆ ಪಕ್ಷದಿಂದ ಬಂದ ಅಭ್ಯರ್ಥಿಗೆ ನಾವು ಟಿಕೆಟ್ ಕೊಟ್ಟಿದ್ದೇವೆ ಎಂದರೇ ಪಕ್ಷದ ಉದ್ದಾರತನ ಎಂತಹದ್ದು ಎಂಬುದನ್ನ ಗಮನಿಸಿ. ಉಪಚುನಾವಣೆಯ ಮೂರು ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ ಎಂದರು.

ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕೆಲವು ಕಾರ್ಯಗಳು ಮುಡಾದಲ್ಲಿ ಸ್ಥಗಿತಗೊಂಡಿವೆ. ಅವುಗಳನ್ನ ಶುರು ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ದಸರಾ ಮುಗಿದಿದೆ, ಇನ್ನೂ ಆಡಳಿತ ಕಾರ್ಯಗಳು ಚುರುಕುಗೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದೇನೆ ಎಂದು ತಿಳಿಸಿದರು.