ನ್ಯೂಸ್

ಸೆಪ್ಟೆಂಬರ್ ೪ ರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ


ಕಲಬುರಗಿ : -ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಗೆ ಸಂಬAಧಿಸಿದAತೆ ಇದೇ ಸೆಪ್ಟೆಂಬರ್ ೪ ರಿಂದ ೧೫ ರವರೆಗೆ ಪ್ರತಿದಿನ ಬೆಳಿಗ್ಗೆ ೧೧ ರಿಂದ ಸಂಜೆ ೪ ಗಂಟೆಯವರೆಗೆ ನುರಿತ ಉಪನ್ಯಾಸಕರಿಂದ ಉಚಿತವಾಗಿ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅರ್ಹ ಯುವಕ, ಯುವತಿಯರು ತಮ್ಮ ವಿದ್ಯಾರ್ಹತೆಯ ಮೂಲ ಹಾಗೂ ಝೆರಾಕ್ಸ್ ಪ್ರತಿ, ಭಾವಚಿತ್ರ, ಆಧಾರ್‌ಕಾರ್ಡ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ನೋಂದಣಿ ಸಂಖ್ಯೆಯೊAದಿಗೆ ಮೇಲ್ಕಂಡ ದಿನದಂದು ನಡೆಯುವ ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.