ನ್ಯೂಸ್

ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಿ

ಮಳೆಗಾಲದಲ್ಲಿ ಜ್ವರ, ಕಾಲರ, ಡೆಂೆ ಇನ್ನಿತರ ಸಾಂಕ್ರಾಮಿಕ ರೋಗಗಳು ಸೊಳ್ಳೆಗಳಿಂದ ಹೆಚ್ಚಾಗುತ್ತವೆ. ಆದ್ದರಿಂದ ಸಾರ್ವಜನಿಕರು ಮತ್ತು ಸ್ಥಳೀಯ ಸಂಸ್ಥೆ ಅಧಿಕಾರಿಗಳು ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ತಜ್ಞ ವೈದ್ಯ ಡಾ.ಎಸ್.ಚಿದಂಬರ್ ಸಲಹೆ ನೀಡಿದ್ದಾರೆ.

ಕಸದ ರಾಶಿಗಳನ್ನು ತೆರವುಗೊಳಿಸಬೇಕು, ಎಲ್ಲೆಡೆ ತ್ಯಾಜ್ಯ ಸುರಿಯುವುದನ್ನು ಕಡಿಮೆ ಮಾಡಬೇಕು. ಎಲ್ಲಿಯೂ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಆಗ ಸೊಳ್ಳೆಗಳ ಸಂತಾನೋತ್ಪತ್ತಿ ತಪ್ಪಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು, ಯಾವಾಗಲೂ ಶುದ್ಧ ನೀರು ಕುಡಿಯಬೇಕು ಎಂದು ಮಾಹಿತಿ ನೀಡಿದ್ದಾರೆ.