ನ್ಯೂಸ್

ಸೋನಿಯಾ ಗಾಂಧಿ ವಿಚಾರಣೆ: ಸಲೀಂ ಅಹ್ಮದ ಆಕ್ರೋಶ

ಗದಗ: ತನಿಖಾ ಸಂಸ್ಥೆ ಮೂಲಕ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ, ಮುಖಂಡ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ. ಇದೇ ವರ್ತನೆ ಮುಂದುವರಿದರೆ ದೇಶದಲ್ಲಿರುವ ಕಾಂಗ್ರೆಸ್ಸಿನ ಕೋಟ್ಯಂತರ ಕಾರ್ಯಕರ್ತರು ಬೀದಿಗಿಳಿದು ಉಗ್ರ ಹೋರಾಟ ಮಾಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಹೇಳಿದರು. 

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಬಿಐ, ಇಡಿ ಸಂಸ್ಥೆಗಳನ್ನು ಬಿಜೆಪಿ ಘಟಕಗಳನ್ನಾಗಿ ಪರಿವರ್ತಿಸಿಕೊಂಡಿದ್ದು, ಸರ್ಕಾರದ ವಿರುದ್ಧ ಮಾತನಾಡುವ ಕಾಂಗ್ರೆಸ್ ಮುಖಂಡರನ್ನು ಹೆದರಿಸುತ್ತಿದ್ದಾರೆ. ದೇಶದ ಸ್ವಾತಂತ್ರ್ಯ ತಂದುಕೊಟ್ಟಿರುವ ಪಕ್ಷ ನಮ್ಮದಾಗಿದ್ದು. ಇಂತಹ ಯಾವುದೇ ಬೆದರಿಕೆಗೂ ಬಗ್ಗಲ್ಲ, ಜಗ್ಗಲ್ಲ ಎಂದರು.

2015ರಲ್ಲಿ ಡೆಕ್ಕನ್ ಹೆರಾಲ್ಡ್ ಕೇಸ್ ಕ್ಲೋಸ್ ಆಗಿದ್ದರೂ ಕಾಂಗ್ರೆಸ್ ಮುಖಂಡರಿಗೆ ತೊಂದರೆ ನೀಡಬೇಕೆಂಬ ಉದ್ದೇಶದಿಂದ ಇಡಿ ಮೂಲಕ ವಿಚಾರಣೆ ಆರಂಭಿಸಲಾಗಿದೆ. ಯಾವುದೇ ಪ್ರಕರಣ ದಾಖಲಿಸದೇ ವಿಚಾರಣೆ ಮಾಡುವುದು ಸರಿಯಲ್ಲ. ಗುರುವಾರ ಸೋನಿಯಾಗಾಂಧಿ ಅವರನ್ನು ವಿಚಾರಣೆ ಮಾಡಿದ್ದನ್ನು ವಿರೋಧಿಸಿ ದೇಶಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರ ಅಣತಿಯಂತೆ ನಡೆಯುತ್ತಿರುವ ಈ ವಿಚಾರಣೆ ಕೈಬಿಡದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಅವರು ಎಚ್ಚರಿಕೆ ನೀಡಿದರು.

ದೇಶದಲ್ಲಿ ಹಿಟ್ಲರ್ ಆಡಳಿತವಿದ್ದು, ಸರ್ಕಾರ ವಿರುದ್ಧ ಮಾತನಾಡಿದರೆ ಅವರನ್ನು ಬೆದರಿಸುವ ತಂತ್ರ ನಡೆಯುತ್ತಿದೆ. ಇಂತಹ ಸರ್ವಾ„ಕಾರಿ ಧೋರಣೆ ಸರ್ಕಾರಕ್ಕೆ ಮತದಾರರು ತಕ್ಕ ಶಾಸ್ತಿ ಮಾಡಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಯ ಖಚಿತ ಎಂದು ಅವರು ಹೇಳಿದರು.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂ„ ಅವರ ನೇತೃತ್ವದಲ್ಲಿ ಅಕ್ಟೋಬರ್ 2ರಿಂದ ಭಾರತ್ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. 3500 ಕಿಮೀ ಪಾದಯಾತ್ರೆ ಇದಾಗಿದ್ದು, ಕರ್ನಾಟಕದ 22 ಜಿಲ್ಲೆಗಳಲ್ಲಿ 500ಕಿಮೀ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯಲ್ಲಿ ರಾಜ್ಯ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಯಾವ ಜಿಲ್ಲೆಯಲ್ಲಿ ಪಾದಯಾತ್ರೆ ನಡೆಯಲಿದೆ ಎಂಬ ರೂಪುರೇಷೆ ಅಂತಿಮ ಹಂತದಲ್ಲಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ಘೋಷಣೆ ಮಾಡಲಾಗುವುದು ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್.ಪಾಟೀಲ, ಮಾಜಿ ಶಾಸಕರಾದ ಬಿ.ಆರ್.ಯಾವಗಲ್, ರಾಮಕೃಷ್ಣ ದೊಡ್ಡಮನಿ, ಶ್ರೀಶೈಲಪ್ಪ ಬಿದರೂರ, ಸಯ್ಯದ ಮತ್ತಿತರರು ಇದ್ದರು.  


ದಾವಣಗೆರೆಯಲ್ಲಿ ಆಯೋಜಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮುಖಂಡ ರಾಹುಲ್ ಗಾಂ„ ಭಾಗವಹಿಸಲಿದ್ದಾರೆ. ಸಿದ್ದರಾಮೋತ್ಸವ ಎನ್ನುವುದು ಮಾಧ್ಯಮ ಎಂದು ವಿಪ ಸದಸ್ಯ ಸಲೀಂ ಅಹ್ಮದ ಹೇಳಿದರು.