ನಗರ ಘಟಕದ ಅಧ್ಯಕ್ಷ ಎಚ್.ಎ. ನಾಗರಾಜು, ಪ್ರಮುಖರಾದ ರಮೇಶ್, ಜಮೀರ್, ಕಲ್ಯಾಣ್ ರಾಜು, ಬಿ.ಜಿ. ರವಿ, ಮೋಹನ್ ಮತ್ತಿತರರು ಇದ್ದರು. ಜಿಲ್ಲೆಯಲ್ಲಿ ಎರಡು ನೂತನ ಶಾಸಕರು ಆಯ್ಕೆಯಾದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು  
ನ್ಯೂಸ್

ಸೋಮವಾರಪೇಟೆಯಲ್ಲಿ ಮನೆ ಮಾಡಿದ ಸಂಭ್ರಮ

ಸೋಮವಾರಪೇಟೆ: ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದಿಂದ ಡಾ.ಮಂಥರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದಿಂದ ಪೊನ್ನಣ್ಣ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಶನಿವಾರ ವಿಜಯೋತ್ಸವ ಆಚರಿಸಲಾಯಿತು.
ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭ ಪಕ್ಷದ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಶೀಲಾ ಡಿಸೋಜ ಮಾತನಾಡಿ, ಬಿಜೆಪಿ ದುರಾಡಳಿತದಿಂದ ಬೇಸತ್ತ ಮತದಾರರು, ಈ ಬಾರಿ ಜಿಲ್ಲೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಕೊಡಗು ಬಿಜೆಪಿಯ ಭದ್ರಕೋಟೆ ಎಂದು ಬೀಗುತ್ತಿದ್ದವರಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ಕೊಡಗು ಬಿಜೆಪಿ ಮುಕ್ತವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆ ಅಭಿವೃದ್ಧಿಯತ್ತ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.