ವಿಜಯವಾಣಿ ಸುದ್ದಿಜಾಲ ಕೋಲಾರ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ರವರು ಭಾನುವಾರ ಕೋಲಾರ ಜಿಲ್ಲೆಗೆ ಭೇಟಿ ನೀಡಿ, ಕೋಲಾರ ನಗರದ ವೀರಾಂಜನೇಯ ನಗರದಲ್ಲಿರುವ ಹಂದಿ ಜೋಗಿ ಅಲೆಮಾರಿ ಸಮುದಾಯವನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿದರು.
ನಮ್ಮ ಸಮುದಾಯದವರಿಗೆ ಮನೆ ಕಟ್ಟಿಕೊಳ್ಳಲು ನಿವೇಶನ ಮಂಜೂರಾಗಿದ್ದು, ನಗರಸಭೆಯಿಂದ ಅಗತ್ಯ ದಾಖಲೆಗಳನ್ನು ಕೊಡುತ್ತಿಲ್ಲ. ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ಜಾತಿ ಪ್ರಮಾಣ ಪತ್ರ ಮತ್ತು ಪಡಿತರ ಚೀಟಿಗಳನ್ನು ನೀಡುತ್ತಿಲ್ಲ ಎಂದು ಹಂದಿ ಜೋಗಿ ಅಲೆಮಾರಿ ಸಮುದಾಯದವರು ನಿಗಮದ ಅಧ್ಯಕ್ಷರ ಬಳಿ ಮನವಿ ಮಾಡಿದರು.
ಸ್ಥಳದಲ್ಲಿಯೇ ಇದ್ದ ತಹಶೀಲ್ದಾರ್ ರವರಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರವರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ ಮತ್ತು ಪಡಿತರ ಚೀಟಿಗಳನ್ನು ಕೂಡಲೆ ಒದಗಿಸಲು ಅಧ್ಯಕ್ಷರು ಸೂಚಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಅಲೆಮಾರಿ ಕೊರಚ, ಕೊರಮ ಕ್ಷೇಮಾಭಿವೃದ್ಧಿ ಸಂಘದವರು ಆಯೋಜಿಸಿದ್ದ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ನಿಮಗದ ಅಧ್ಯಕ್ಷ ಜಿ.ಪಲ್ಲವಿ ಸರ್ಕಾರವು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗದವರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ತಾವುಗಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಾಗೂ ಈ ಸಮುದಾಯದ ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು ಎಂದರು.
ಅಲೆಮಾರಿ ಜನಾಂಗದ ಸಮಸ್ಯೆಗಳಿದ್ದಲ್ಲಿ ತಾವು ನೇರವಾಗಿ ಕೇಂದ್ರ ಕಚೇರಿಗೆ ಬಂದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಸೂಚಿಸಿದರು ಮುಂದಿನ ದಿನಗಳಲ್ಲಿ ಕೋಲಾರ ಜಿಲ್ಲಾದ್ಯಂತ ಭೇಟಿ ನೀಡಿ ಸಮಸ್ಯೆಗಳಿಗೆ ಸ್ಪಂದಿಸಲಾಗುವುದೆAದು ತಿಳಿಸಿದರು.
ಇವರೊಂದಿಗೆ ಅಪರ ಜಿಲ್ಲಾಧಿಕಾರಿ ಮಂಗಳಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀನಿವಾಸನ್, ತಹಶೀಲ್ದಾರ್ ಡಾ.ನಯನ ಇದ್ದರು.
ಚಿತ್ರ ೦೩ ಕೆ.ಎಲ್.ಆರ್. ೦೨ : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ರವರು ಕೋಲಾರಕ್ಕೆ ಆಗಮಿಸಿದಾಗ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್ ರವರು ಬರಮಾಡಿಕೊಂಡರು.