ಹಳೇಬೀಡು: ಇಲ್ಲಿನ ವಿಶ್ವಪ್ರಸಿದ್ಧ ಹೊಯ್ಸಳೇಶ್ವರ ದೇಗುಲದ ಮುಂಭಾಗ ಕೊರೊನಾ ವೈರಸ್ ಸೋಂಕಿನ ಪರಿಣಾಮಗಳ ಬಗ್ಗೆ ತಿಳಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಕೇಂದ್ರ ತೆರೆಯಲಾಗಿದೆ.
ಐತಿಹಾಸಿಕ ತಾಣಗಳನ್ನು ವೀಕ್ಷಿಸಲು ದೇಶ-ವಿದೇಶಗಳಿಂದ ಪ್ರತಿನಿತ್ಯ ಪ್ರವಾಸಿಗರು ಆಗಮಿಸುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಿ ವೈರಸ್ ಹರಡುವಿಕೆಯ ಬಗ್ಗೆ ಕರಪತ್ರದ ಮೂಲಕ ಮಾಹಿತಿ ನೀಡಲಾಗುತ್ತಿದೆ.
ಹಳೇಬೀಡು ಸಮುದಾಯ ಆರೋಗ್ಯ ಕೇಂದ್ರ ವೈದಾಧಿಕಾರಿಗಳು ಹಾಗೂ ಸಿಬ್ಬಂದಿ ತಪಾಸಣೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಜ್ವರ, ಶೀತ, ಕೆಮ್ಮು ಹಾಗೂ ರಕ್ತದೊತ್ತಡದ ಪರೀಕ್ಷೆಗಳನ್ನು ಮಾಡಿ ವಿವರ ನೀಡುವಲ್ಲಿ ನಿರತರಾಗಿದ್ದಾರೆ. ಈ ಭಾಗದಲ್ಲಿ ಇಲ್ಲಿಯವರೆಗೆ ವೈರಸ್ ಸೋಂಕಿನ ಯಾವುದೆ ನಿದರ್ಶನಗಳು ಕಂಡುಬಂದಿಲ್ಲವಾದರೂ ವಿದೇಶಿ ಪ್ರಜೆಗಳು ಹೆಚ್ಚು ಭೇಟಿ ನೀಡುವ ಹಿನ್ನೆಲೆಯಲ್ಲಿ ಕ್ರಮವಹಿಸಲಾಗಿದೆ.