ಸರಗೂರು: ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಮಂಜುಳಾ ರಾಮಚಂದ್ರ ಮತ್ತು ಉಪಾಧ್ಯಕ್ಷರಾಗಿ ಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ಚುನಾವಣೆ ಪ್ರಕ್ರಿಯೆ ನಡೆಯಿತು. 10 ಸದಸ್ಯರ ಬಲವಿರುವ ಪಂಚಾಯಿತಿಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಮಂಜುಳಾ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಪ್ರಕಾಶ್ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿ ಉಷಾ ಅವಿರೋಧ ಆಯ್ಕೆ ಘೋಷಣೆ ಮಾಡಿದರು.
ಉಪಾಧ್ಯಕ್ಷ ಪ್ರಕಾಶ್ ಮಾತನಾಡಿ, ಪ್ರತಿ ಗ್ರಾಮಕ್ಕೂ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಸದಸ್ಯರಾದ ರತ್ನಮ್ಮ ರಾಜೇಶ್, ಶಿವಲಿಂಗಯ್ಯ, ಗಂಗಾಧರ್, ಶಿವಕುಮಾರ್, ಶಿವರಾಜು ಅರಸು, ಪ್ರಿಯಾಂಕಾ ನಾಗರಾಜು, ಜ್ಯೋತಿ ರಮೇಶ್, ಭಾಗ್ಯ ಕೆಂಪಸಿದ್ದ, ಪಿಡಿಒ ಪುಟ್ಟವೀರಯ್ಯ, ಸಿಬ್ಬಂದಿ ಶಿವರಾಜು, ಸಣ್ಣಸ್ವಾಮಿ, ಸಿದ್ದರಾಜು, ನಾಗರಾಜು, ಕಾಂಗ್ರೆಸ್ ಮುಖಂಡರಾದ ಪುಟ್ಟಸ್ವಾಮಿ, ವಣಕಾರ, ರಮೇಶ್, ಉಮೇಶ್ ಇತರರಿದ್ದರು.