ಹಾಸನ: ಜಿಲ್ಲೆಯಲ್ಲಿ ಕರೊನಾ ಸೋಂಕಿಗೆ ಸೋಮವಾರ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಅರಸೀಕೆರೆ ತಾಲೂಕು ಮೂಲದ 38 ವರ್ಷದ ನಗರದ ಕೋವಿಡ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಾವಿನ ಸಂಖ್ಯೆ 9 ಕ್ಕೆ ಏರಿಕೆಯಾದಂತಾಗಿದೆ.
ಇದೇ ನಾಲ್ಕರಂದು ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸೋಮವಾರ ಮಧ್ಯಾಹ್ನ ಮೃತಪಟ್ಟಿದ್ದು, ಅವರ ಗಂಟಲ ದ್ರವದ ಮಾದರಿಯಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ತಿಳಿಸಿದರು.
ಕಳೆದ ಆರು ದಿನಗಳಿಂದ ದಿನಕ್ಕೊಂದರಂತೆ ಕರೊನಾ ಸೋಂಕಿತರು ಮೃತ ಪಟ್ಟಿದ್ದಾರೆ.