ಸಂಕೇಶ್ವರ : ಸ್ಥಳೀಯ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಬಸವರಾಜ ಕಲ್ಲಟ್ಟಿ ಹಾಗೂ ಉಪಾಧ್ಯಕ್ಷರಾಗಿ ಅಶೋಕ ಪಟ್ಟಣಶೆಟ್ಟಿ ಅವಿರೋಧ ಆಯ್ಕೆಯಾಗಿದ್ದಾರೆ.
ಕಾರಖಾನೆ ಅಧ್ಯಕ್ಷ ಸ್ಥಾನಕ್ಕೆ ಶಾಸಕ ನಿಖಿಲ್ ಕತ್ತಿ ರಾಜೀನಾಮೆ ನೀಡಿದ್ದರಿಂದ ಹಾಗೂ ಉಪಾಧ್ಯಕ್ಷ ಶ್ರೀಶೈಲಪ್ಪಾ ಮಗದುಮ್ಮ ನಿಧನದಿಂದ ಹುದ್ದೆ ತೆರವುಗೊಂಡಿತ್ತು. ಕಾರಖಾನೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿಯಾಗಿದ್ದ ವ್ಯವಸ್ಥಾಪಕ ನಿರ್ದೇಶಕ ಸಾತಪ್ಪ ಕರ್ಕಿನಾಯಿಕ ಅವಿರೋಧ ಆಯ್ಕೆ ಘೋಷಿಸಿದರು.
ಜೊಲ್ಲೆ ಪ್ರತ್ಯೆಕ್ಷ - ಕತ್ತಿ ಗೈರು:
ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕ ನಿಖಿಲ್ ಕತ್ತಿ ಗೈರು ಹಾಜರಿದ್ದು, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾರಖಾನೆಯ ನಿರ್ದೇಶಕ ಅಪ್ಪಾಸಾಹೇಬ ಶಿರಕೋಳಿ, ಬಾಬಾಸಾಹೇಬ ಅರಬೋಳೆ, ಬಸವರಾಜ ಮರಡಿ, ಪ್ರಭುದೇವ ಪಾಟೀಲ, ಶಿವನಾಯಿಕ ನಾಯಿಕ ಸೇರಿದಂತೆ ಇತರರು ಉಪಸ್ಥಿತರಿದ್ದರು.