ನ್ಯೂಸ್

ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಮನವಿ : ಸೋಮವಾರಪೇಟೆ ನಿಲ್ದಾಣ ಪರಿಶೀಲಿಸಿದ ವಿಭಾಗೀಯ ನಿಯಂತ್ರಣಾಧಿಕಾರಿ


ಕೊಡಗು : ಸೋಮವಾರಪೇಟೆ ವ್ಯಾಪ್ತಿಯ ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚಿನ ಬಸ್‌ಗಳನ್ನು ಒದಗಿಸುವಂತೆ ಸಾರ್ವಜನಿಕರು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಿದರು.


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಜಯಶಂಕರ್‌ಶೆಟ್ಟಿ ಅವರು ಸೋಮವಾರಪೇಟೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಇತ್ತೀಚೆಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ಅಬ್ದುಲ್ ಅಜೀಜ್, ಯಡೂರು ಕುಶಾಲಪ್ಪ ಸೇರಿದಂತೆ ಹಲವರು ಪ್ರಯಾಣಿಕರ ಹಿತದೃಷ್ಟಿಯಿಂದ ಕೆಲ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಓಡಿಸುವಂತೆ ಮನವಿ ಮಾಡಿದರು.


ಈ ಮೊದಲು ಸಚರಿಸುತ್ತಿದ್ದ ಹಲವು ಬಸ್‌ಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಮಾಸಿಕ ಮತ್ತು ವಾರ್ಷಿಕ ಬಸ್‌ಪಾಸ್ ಪಡೆದುಕೊಂಡಿರುವ ಸರ್ಕಾರಿ ಹಾಗೂ ಖಾಸಗಿ ಕಚೇರಿ ಸಿಬ್ಬಂದಿಗೆ ಸಮಸ್ಯೆಯಾಗಿದೆ. ಈ ಹಿಂದೆ ಸಂಚರಿಸುತ್ತಿದ್ದ ಹಲವು ಮಾರ್ಗಗಳ ಬಸ್‌ಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಸಮಸ್ಯೆಯಾಗಿದೆ. ಹಾಗಾಗಿ ಹೆಚ್ಚುವರಿ ಬಸ್‌ಗಳನ್ನು ಓಡಿಸುವಂತೆ ಮನವಿ ಮಾಡಿದರು.


ಸೋಮವಾರಪೇಟೆ ಹಾಸನ ಜಿಲ್ಲೆಯ ಗಡಿ ಭಾಗಕ್ಕೆ ಹೊಂದಿಕೊಂಡಿದ್ದು, ಸೋಮವಾರಪೇಟೆ ಬಸ್ ನಿಲ್ದಾಣವನ್ನು ಹಾಸನ ವಿಭಾಗಕ್ಕೆ ಸೇರಿಸಲು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ವ್ಯವಸ್ಥಾಪಕ ನಿರ್ದೇಶಕರು, ಮುಖ್ಯ ಸಂಚಾರ ವ್ಯವಸ್ಥಾಪಕರಿಗೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು. ಬೇಡಿಕೆಗಳ ಬಗ್ಗೆ ಲಿಖಿತ ಮನವಿ ನೀಡಿದರೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರಶೆಟ್ಟಿ ಭರವಸೆ ನೀಡಿದರು. ಮಡಿಕೇರಿ ಘಟಕದ ವ್ಯವಸ್ಥಾಪಕಿ ಗೀತಾ ಇದ್ದರು.