ಮೈಸೂರು: ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಬುಧವಾರ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಕಾಲ್ನಡಿಗೆ ಜಾಥಾ ನೆರವೇರಿತು.
ಜಾಥಾಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿ ಮಾತನಾಡಿ, ತ್ರಿಭಾಷಾ ನೀತಿ ಮತ್ತು ಶಿಕ್ಷಣ ಮತ್ತು ಉದ್ಯೋಗದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವ ಬಗ್ಗೆ ದೊಡ್ಡ ಹೋರಾಟ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡವೇ ಸೌರ್ವಭೌಮ, ಕನ್ನಡಾಂಬೆ ರಕ್ಷಣಾ ವೇದಿಕೆಯ ಹೋರಾಟದ ಜತೆ ನಾವಿದ್ದೇವೆ. ರಾಜ್ಯದಲ್ಲಿ ಕಂಪನಿಗಳು ಕಾರ್ಯನಿರ್ವಹಿಸಲು ಕನ್ನಡಿಗರ ಅಪಾರ ಶ್ರಮ ಕಾರಣವಾಗಿದೆ ಎಂದರು.
ಬಿಜೆಪಿ ಮುಖಂಡರಾದ ಕಿರಣ್‌ಗೌಡ, ಸೋಮಶೇಖರ್ ರಾಜು, ನಂಜಪ್ಪ, ವೇದಿಕೆಯ ಅಧ್ಯಕ್ಷ ಬಿ.ಬಿ.ರಾಜಶೇಖರ್, ಪದಾಧಿಕಾರಿಗಳಾದ ಡಿಪಿಕೆ ಪರಮೇಶ್, ರಾಜ್ಯ ಖಜಾಂಚಿ ನಂಜುಂಡ, ಮೈಸೂರು ಜಿಲ್ಲಾ ಅಧ್ಯಕ್ಷ ಸಂತೋಷ್, ಜಿಲ್ಲಾ ಮಹಿಳಾ ವಿಭಾಗದ ಅಧ್ಯಕ್ಷರಾದ ಮಂಜುಳಾ, ಪದಾಧಿಕಾರಿಗಳು ಇತರರಿದ್ದರು.