ಸಾಂದರ್ಭಿಕ ಚಿತ್ರ 
ನ್ಯೂಸ್

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ”ಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ನಾವೀನ್ಯತೆ (innovation), ತಾರ್ಕಿಕ ಸಾಧನೆ (scholastic), ಕ್ರೀಡೆ (sports) ಮತ್ತು ಕಲೆ, ಸಾಂಸ್ಕೃತಿಕ, ಸಂಗೀತ (art, cultural Music) ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 05 ರಿಂಧ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ’ ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, 04 ಕ್ಷೇತ್ರಗಳಿಂದ ಪ್ರಶಸ್ತಿಗೆ ಆಯ್ಕೆಯಾದ 08 ಮಕ್ಕಳಿಗೆ ತಲಾ ರೂ.10,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

 2025/26ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಯನ್ನು ಆಗಸ್ಟ್ 28 ರಿಂದ ಪಡೆದು, ಪ್ರಸ್ತಾವನೆಯನ್ನು ಸೆಪ್ಟೆಂಬರ್ 22ರ ಸಂಜೆ 5.30 ರೊಳಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಭವನ, ಕೃಷ್ಣದೇವರಾಯ ವೃತ್ತ, ವಿಜಯನಗರ 2ನೇ ಹಂತ, ಮೈಸೂರು ಇಲ್ಲಿಗೆ ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು.

 ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2495432ನ್ನು ಸಂಪರ್ಕಿಸಬಹುದು ಎಂದು ಮೈಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.