ನ್ಯೂಸ್

ಹೊಳಲ್ಕೆರೆಯಲ್ಲಿ ನಾಳೆ ಶ್ರೀ ಬಸವೇಶ್ವರ ಜಯಂತಿ, ಪ್ರತಿಭಾ ಪುರಸ್ಕಾರ ಸಮಾರಂಭ

ಚಿತ್ರದುರ್ಗ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹೊಳಲ್ಕೆರೆ ತಾಲೂಕು ಘಟಕ, ವೀರಶೈವ ಲಿಂಗಾಯತ ಸಮಾಜ ಮತ್ತು ವೀರಶೈವ ಲಿಂಗಾಯತ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಮೇ 24 ರಂದು ಮಧ್ಯಾಹ್ನ 12 ಕ್ಕೆ ಹೊಳಲ್ಕೆರೆಯ ಸಂವಿಧಾನಸೌಧದಲ್ಲಿ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಅವರ ಸಮ್ಮುಖದಲ್ಲಿ ಏರ್ಪಡಿಸಿರುವ ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಉಪಾಧ್ಯಕ್ಷ ಅಣಬೇರು ರಾಜಣ್ಣ ಉದ್ಘಾಟಿಸುವರು. ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಮಹದೇವ ಬಿದರಿ ಮೆರವಣಿಗೆಗೆ ಚಾಲನೆ ನೀಡುವರು. ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸದ ಗೋವಿಂದ ಎಂ. ಕಾರಜೋಳ, ಶಾಸಕ ಡಾ.ಎಂ. ಚಂದ್ರಪ್ಪ, ಎಂಎಲ್‌ಸಿ ಕೆ.ಎಸ್. ನವೀನ್, ಮಾಜಿ ಸಚಿವ ಎಚ್. ಆಂಜನೇಯ, ಮಹಾಸಭಾ ರಾಷ್ಟ್ರೀಯ ಮಹಿಳಾ ಅಧ್ಯಕ್ಷೆ ವೀಣಾಕಾಶಪ್ಪನವರ್, ಮಹಾಸಭಾದ ಹೊಳಲ್ಕೆರೆ ತಾಲೂಕು ಅಧ್ಯಕ್ಷ ಜಿ.ಟಿ. ಪ್ರಭಾಕರ್‌ಮಾಳಿಗೆ, ಮಾಜಿ ಶಾಸಕರಾದ ಜಿ.ಸಿ. ಮಂಜುನಾಥ್, ಎಂ.ಬಿ.ತಿಪ್ಪೇರುದ್ರಪ್ಪ, ಯು.ಎಚ್. ತಿಮ್ಮಣ್ಣ, ಪಿ. ರಮೇಶ್, ಹೊಳಲ್ಕೆರೆ ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷೆ ನಾಗರತ್ನ ವೇದಮೂರ್ತಿ ಮತ್ತಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಆರ್. ಮಾಧುರಿಗಿರೀಶ್ ತಿಳಿಸಿದ್ದಾರೆ.