ನ್ಯೂಸ್

ಹೊಸದಾಗಿ ವಾಣಿಜ್ಯ ಶಿಕ್ಷಣ ಸಂಸ್ಥೆ ಹಾಗೂ ಗಣಕಯಂತ್ರ ಶಿಕ್ಷಣ ಸಂಸ್ಥೆ ಪ್ರಾರಂಭಿಸಲು ಅರ್ಜಿ ಆಹ್ವಾನ

ಭಾಗೀಯ ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಜಂಟಿ ನಿರ್ದೇಶಕರ ಕಚೇರಿಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಹೊಸದಾಗಿ ವಾಣಿಜ್ಯ (ಬೆರಳಚ್ಚು ಹಾಗೂ ಶಿಘ್ರಲಿಪಿ) ಶಿಕ್ಷಣ ಸಂಸ್ಥೆಗಳನ್ನು ಹಾಗೂ ಗಣಕಯಂತ್ರ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.

 ಇಚ್ಚೆಯುಳ್ಳ ಸಂಸ್ಥೆಯವರು ಹಾಗೂ ಖಾಸಗಿ ವ್ಯಕ್ತಿಗಳು ಸಹ ಹೊಸದಾಗಿ ಗಣಕಯಂತ್ರ ಶಿಕ್ಷಣ ಸಂಸ್ಥೆ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದ್ದು, ಮೈಸೂರು ವಿಭಾಗಕ್ಕೆ ಸಂಬoಧಪಟ್ಟoತೆ ಅರ್ಜಿಯನ್ನು ಅಕ್ಟೋಬರ್ 31 ರೊಳಗೆ ಸಲ್ಲಿಸಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ವೆಬ್ಸೆöÊಟ್ https://schooleducation.karnataka.gov.in :- secondary secondary education-commerce education ದಲ್ಲಿ ಮತ್ತು ವಿಭಾಗೀಯ ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಜಂಟಿ ನಿರ್ದೇಶಕರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಶಾಲಾ ಶಿಕ್ಷಣ ಇಲಾಖೆ, ಮೈಸೂರು ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಮೈಸೂರು ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪದನಿಮಿತ್ತ ಜಂಟಿ ನಿರ್ದೇಶಕರು ಹಾಗೂ ವಿಭಾಗೀಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.