ಕ್ರೀಡೆ

ಕೋಲ್ಕತ್ತ ನೈಟ್‌ರೈಡರ್ಸ್​​ಗೆ ಸತತ 2ನೇ ಜಯ; ರಾಜಸ್ಥಾನ ರಾಯಲ್ಸ್​​ಗೆ 'ಹ್ಯಾಟ್ರಿಕ್​' ನಿರಾಸೆ

lakshmihegde

ದುಬೈ: ಸರ್ವಾಂಗೀಣ ನಿರ್ವಹಣೆ ತೋರಿದ 2 ಬಾರಿಯ ಚಾಂಪಿಯನ್ ಕೋಲ್ಕತ ನೈಟ್‌ರೈಡರ್ಸ್‌ ತಂಡ ಐಪಿಎಲ್-13ರಲ್ಲಿ ಸತತ 2ನೇ ಜಯ ದಾಖಲಿಸಿತು. ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಬಳಗ ರಾಜಸ್ಥಾನ ರಾಯಲ್ಸ್ ತಂಡವನ್ನು 37 ರನ್‌ಗಳಿಂದ ಸೋಲಿಸಿತು. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಸ್ಟೀವನ್ ಸ್ಮಿತ್ ಪಡೆ ನಿರಾಸೆ ಅನುಭವಿಸಿತು. ಇದರೊಂದಿಗೆ ಟೂರ್ನಿಯಲ್ಲಿ ಎಲ್ಲ ತಂಡಗಳು ಸೋಲು ಕಂಡಂತಾಯಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ, ವೇಗಿ ಜ್ರೋಾ ಆರ್ಚರ್ (18ಕ್ಕೆ 2) ಬಿಗಿ ಬೌಲಿಂಗ್ ದಾಳಿಯ ನಡುವೆಯೂ ಯುವ ಆರಂಭಿಕ ಶುಭಮಾನ್ ಗಿಲ್ (47 ರನ್, 34 ಎಸೆತ, 5 ಬೌಂಡರಿ, 1 ಸಿಕ್ಸರ್) ಹಾಗೂ ಅನುಭವಿ ಇವೊಯಿನ್ ಮಾರ್ಗನ್ (34*ರನ್, 23 ಎಸೆತ, 1 ಬೌಂಡರಿ, 2 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಲವಾಗಿ 6 ವಿಕೆಟ್‌ಗೆ 174 ರನ್ ಪೇರಿಸಿತು. ಪ್ರತಿಯಾಗಿ ಯುವ ಬೌಲರ್‌ಗಳ ಮಾರಕ ದಾಳಿಗೆ ನಲುಗಿದ ರಾಜಸ್ಥಾನ ರಾಯಲ್ಸ್ ತಂಡ 9 ವಿಕೆಟ್‌ಗೆ 137 ರನ್‌ಗಳಿಸಲಷ್ಟೇ ಶಕ್ತವಾಯಿತು.