ದುಬೈ: ಸೆಪ್ಟೆಂಬರ್ ತಿಂಗಳ ಐಸಿಸಿ ಕ್ರಿಕೆಟರ್ ಪ್ರಶಸ್ತಿಗೆ ಭಾರತದ ನಾಲ್ವರು ತಾರೆಯರು ರೇಸ್ನಲ್ಲಿದ್ದಾರೆ. ಪುರುಷರ ವಿಭಾಗದಲ್ಲಿ ಟೀಮ್ ಇಂಡಿಯಾ ನಾಯಕ ಶುಭಮಾನ್ ಗಿಲ್ ಮತ್ತು ಆರಂಭಿಕ ಅಭಿಷೇಕ್ ಶರ್ಮ ಹಾಗೂ ಮಹಿಳಾ ವಿಭಾಗದಲ್ಲಿ ಶೆಫಾಲಿ ವರ್ಮ ಮತ್ತು ಶ್ರೀ ಚರಣಿ ನಾಮ ನಿರ್ದೇಶನಗೊಂಡಿದ್ದಾರೆ.
ಪುರುಷರ ವಿಭಾಗದಲ್ಲಿ ಜಿಂಬಾಬ್ವೆ ನಾಯಕ ಸಿಕಂದರ್ ರಾಜಾ ಮತ್ತು ಮಹಿಳಾ ವಿಭಾಗದಲ್ಲಿ ಶ್ರೀಲಂಕಾ ನಾಯಕಿ ಚಾಮರಿ ಅಟಪಟ್ಟು ಕೂಡ ನಾಮನಿರ್ದೇಶನಗೊಂಡಿದ್ದಾರೆ. ಅಭಿಷೇಕ್ ಸೆಪ್ಟೆಂಬರ್ನಲ್ಲಿ ಆಡಿರುವ 4 ಟಿ20 ಪಂದ್ಯಗಳಲ್ಲಿ 229 ರನ್ ಬಾರಿಸಿದ್ದಾರೆ. ಈ ಪೈಕಿ ಅಫ್ಘಾನಿಸ್ತಾನ ವಿರುದ್ಧ 30 ಎಸೆತಗಳಲ್ಲೇ ಸಿಡಿಸಿರುವ ಶತಕಗಳೂ ಸೇರಿವೆ. ಗಿಲ್ ಸೆಪ್ಟೆಂಬರ್ನಲ್ಲಿ ವಿಂಡೀಸ್ ವಿರುದ್ಧದ 2 ಏಕದಿನ ಪಂದ್ಯಗಳಲ್ಲಿ 333 ರನ್ ಬಾರಿಸಿದ್ದಾರೆ. ಇದರಲ್ಲಿ ವಿಂಡೀಸ್ ವಿರುದ್ಧದ ದ್ವಿಶತಕವೂ ಸೇರಿದೆ. ಗಿಲ್ 5ನೇ ಬಾರಿ ಐಸಿಸಿ ಮಾಸಿಕ ಪ್ರಶಸ್ತಿ ಪಡೆಯುವ ರೇಸ್ನಲ್ಲಿದ್ದಾರೆ.
ಶೆಫಾಲಿ ವರ್ಷ ಸೆಪ್ಟೆಂಬರ್ನಲ್ಲಿ ಆಡಿರುವ ಏಷ್ಯಾಕಪ್ ಮತ್ತು ಏಷ್ಯನ್ ಗೇಮ್ಸ್ನ 7 ಪಂದ್ಯಗಳಲ್ಲಿ 360 ರನ್ ಮತ್ತು 6 ವಿಕೆಟ್ ಗಳಿಸಿದ್ದರೆ, ಎಡಗೈ ಸ್ಪಿನ್ನರ್ ಶ್ರೀಚರಣಿ 7 ಪಂದ್ಯಗಳಲ್ಲಿ 18 ವಿಕೆಟ್ ಕಬಳಿಸಿ ಮಿಂಚಿದ್ದಾರೆ.