ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವು ಪಾಕಿಸ್ತಾನದ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯಗಳಿಸಿದೆ. ಅಫ್ಘಾನಿಸ್ತಾನದ ವಿರುದ್ಧ ಸೋಲುವ ಮೂಲಕ ಪಾಕಿಸ್ತಾನ ವಿಶ್ವಕಪ್ನಲ್ಲಿ ಹ್ಯಾಟ್ರಿಕ್ ಮುಖಭಂಗ ಅನುಭವಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಅಯಕ ಬಾಬರ್ ಅಜಂ (74 ರನ್, 92 ಎಸೆತ, 4 ಬೌಂಡರಿ, 1 ಸಿಕ್ಸರ್), ಅಬ್ದುಲ್ಲ ಶಫಿಕ್ (58 ರನ್, 75 ಎಸೆತ, 5 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ಫಲವಾಗಿ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 282ರನ್ ಗಳಿಸಿತ್ತು.
ಅಫ್ಘಾನಿಸ್ತಾನ ಪರ ನೂರ್ ಅಹಮದ್ (10-0-49-3), ನವೀನ್ ಉಲ್ ಹಕ್ (7-0-52-2), ಮೊಹಮ್ಮದ್ ನಬಿ (10-0-31-1), ಅಜ್ಮತುಲ್ಲಾ ಓಮರ್ಝೈ (5-0-50-1), ರಶೀದ್ ಖಾನ್ (10-0-41-0), ಮುಜೀಬ್ ಉರ್ ರಹಮಾನ್ (8-0-55-0) ರನ್ ನೀಡಿ ವಿಕೆಟ್ ಪಡೆದಿದ್ದಾರೆ.
283ರನ್ಗಳ ಗುರಿ ಬೆನ್ನತ್ತಿದ್ದ ಅಫ್ಘಾನಿಸ್ತಾನ ತಂಡವು ಆರಂಭಿಕರಾದ ಇಬ್ರಾಹಿಂ ಜರ್ದಾನ್ (85 ರನ್, 113 ಎಸೆತ, 10 ಬೌಂಡರಿ), ರೆಹಮಾನುಲ್ಲಾ ಗುರ್ಬಾಜ್ (65 ರನ್, 53 ಎಸೆತ, 9 ಬೌಂಡರಿ, 1 ಸಿಕ್ಸರ್), ರಹಮತ್ ಷಾ (77 ರನ್, 84 ಎಸೆತ, 5 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ಫಲವಾಗಿ 49 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗುರಿಯನ್ನು ತಲುಪಿ ಗೆಲುವಿನ ನಗೆ ಬೀರಿತ್ತು.
ಪಾಕಿಸ್ತಾನ ಪರ ಹಸನ್ ಅಲಿ (10-1-44-1), ಶಹೀನ್ ಅಫ್ರಿದಿ (10-0-58-1), ಹ್ಯಾರಿಸ್ ರೌಫ್ (8-1-53-0), ಉಸಾಮಾ ಮಿರ್ (8-0-55-0), ಶಾದಾಬ್ ಖಾನ್ (8-0-49-0), ಇಫ್ತಿಕಾರ್ ಅಹಮದ್ (5-0-27-0) ರನ್ ನೀಡಿ ವಿಕೆಟ್ ಪಡೆದಿದ್ದಾರೆ.