ದುಬೈ: ಮಿನಿ ವಿಶ್ವಕಪ್ ಎಂದೇ ಖ್ಯಾತಿ ಪಡೆದಿರುವ ಚಾಂಪಪಿಯನ್ಸ್ ಟ್ರೋಫಿ ಇಂದು (ಫೆಬ್ರವರಿ 19) ಆರಂಭವಾಗಿದ್ದು, ಭಾರತ (Team India) ತನ್ನ ಅಭಿಯಾನವನ್ನು ಫೆಬ್ರವರಿ 20ರಂದು ಬಾಂಗ್ಲಾದೇಶದ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಟೂರ್ನಿಗೆ ಸಂಬಂಧಿಸಿದಂತೆ ಈಗಾಗಲೇ ಉಭಯ ತಂಡಗಳು ಕಠಿಣ ಅಭ್ಯಾಸ ನಡೆಸುತ್ತಿದ್ದು, ಉಭಯ ತಂಡಗಳು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿವೆ.
ಇನ್ನೂ ಸಂಪ್ರದಾಯದಂತೆ ಪಂದ್ಯ ನಡೆಯುವ ಮುನ್ನ ಉಭಯ ತಂಡಗಳ ನಾಯಕರು ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಲಿದ್ದಾರೆ. ಅದೇ ರೀತಿ ಬಾಂಗ್ಲಾದೇಶ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಟೀಮ್ ಇಂಡಿಯಾ (Team India) ವಿರುದ್ಧದ ಪಂದ್ಯಕ್ಕೂ ಮುನ್ನ ನೀಡಿರುವ ಹೇಳಿಕೆ ಎಲ್ಲರ ಗಮನ ಸೆಳೆಯುತ್ತಿದೆ.
ದುಬೈನಲ್ಲಿ ಈ ಸಂಬಂಧ ಮಾತನಾಡಿದ ನಜ್ಮುಲ್, ನಮ್ಮ ತಂಡವು ಗುಣಮಟ್ಟದ ಆಲ್‌ರೌಂಡರ್‌ಗಳನ್ನು ಹೊಂದಿದ್ದು, ನಾವು ಅವರ ಮೇಲೆ ಅವಲಂಬಿತರಾಗಿದ್ದೇವೆ. ನಾವು ಅತಿಯಾಗಿ ಯೋಚಿಸುವುದಿಲ್ಲ. ಪಂದ್ಯಾವಳಿಯಲ್ಲಿ ಎಲ್ಲಾ ತಂಡಗಳು ಗೆಲ್ಲಲು ಸಮರ್ಥವಾಗಿವೆ ಮತ್ತು ನಾವು ನಮ್ಮ ಅವಕಾಶಗಳನ್ನು ಬಯಸುತ್ತೇವೆ. ಭಾರತದ (Team India) ವಿರುದ್ಧ ಗೆಲ್ಲಬೇಕೆಂದರೆ ಇಡೀ ತಂಡವೇ ಕಠಿಣ ಪರಿಶ್ರಮ ಹಾಕಿದರೆ ಮಾತ್ರ ಅದು ಸಾಧ್ಯ. ನಾವು ನಮ್ಮ ಯೋಜನೆಗಳನ್ನು ಉತ್ತಮವಾಗಿ ಕಾರ್ಯಗತಗೊಳಿಸಿದರೆ, ನಮಗೆ ಗೆಲ್ಲುವ ಉತ್ತಮ ಅವಕಾಶವಿದೆ ಎಂದು ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಹೇಳಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೀ), ಕೆಎಲ್ ರಾಹುಲ್ (ವಿಕೀ), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.