ನವದೆಹಲಿ: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಗಳಲ್ಲಿ ಒಂದಾದ ಐಪಿಎಲ್ಗೆ ವರ್ಣರಂಜಿತ ತೆರೆಬಿದ್ದಿದ್ದು, ಐಪಿಎಲ್ನಲ್ಲಿ ಭಾಗಿಯಾಗಿದ್ದ ಆಟಗಾರರು ಜೂನ್ 01ರಿಂದ ಆರಂಭವಾಗಲಿರುವ ಚುಟುಕು ವಿಶ್ವ ಸಮರಕ್ಕೆ ತಯಾರಿ ನಡೆಸುತ್ತಿದ್ದಾರೆ. ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ಶುರುವಾಗುವುದಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಹೀಗಾಗಿ ಮೊದಲ ಸುತ್ತಿನಲ್ಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದಾಗಿದೆ.
ಇನ್ನೂ ಪ್ರತಿಷ್ಠಿತ ಟೂರ್ನಿ ಶುರುವಾಗುವುದಕ್ಕೂ ಮುನ್ನ ಮಾಜಿ ಆಟಗಾರರು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುವುದು ಸಹಜ ಪ್ರಕ್ರಿಯೆ ಅದೇ ರೀತಿ ಇದೀಗ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ಟಿ-20 ವಿಶ್ವಕಪ್ನಲ್ಲಿ ಸೆಮಿಫೈನಲ್ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಯುಡು ತಂಡಗಳ ಕುರಿತು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಈ ಬಾರಿ ಟಿ-20 ವಿಶ್ವಕಪ್ ಸೆಮಿಫೈನಲ್ನಲ್ಲಿ ಭಾರತ, ಇಂಗ್ಲೆಂಡ್, ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸೆಮಿಫೈನಲ್ ಆಡಲಿದೆ. ಏಕೆಂದರೆ ಇತ್ತೀಚಿಗೆ ಐಪಿಎಲ್ ಮುಕ್ತಾಯಗೊಂಡಿದ್ದು, ಈ ನಾಲ್ಕು ತಂಡದ ಆಟಗಾರರು ಟೂರ್ನಿಯಲ್ಲಿ ಭಾಗಿಯಾಗಿದ್ದರು. ಎಲ್ಲರೂ ಉತ್ತಮ ಫಾರ್ಮ್ನಲ್ಲಿರುವ ಕಾರಣ ಈ ನಾಲ್ಕು ತಂಡಗಳು ಸೆಮಿಫೈನಲ್ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಜೂನ್ 27ರಂದು ಟೂರ್ನಿಯ ಸೆಮಿಫೈನಲ್ ಪಂದ್ಯ ನಡೆಯಲಿದ್ದು, ಇರದಲ್ಲಿ ಭಾರತ, ಇಂಗ್ಲೆಂಡ್, ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಣಕ್ಕಿಳಿಯುವ ಮೂಲಕ ಅಂಬಾಟಿ ರಾಯುಡು ಅವರು ನುಡಿದಿರುವ ಭವಿಷ್ಯ ನಿಜವಾಗಲಿದೆಯಾ ಅಥವಾ ಲೆಕ್ಕಾಚಾರವನ್ನು ಉಲ್ಟಾ ಆಗಲಿದೆಯಾ ಎಂದು ಕಾದು ನೋಡಬೇಕಿದೆ.