ನವದೆಹಲಿ: ನಿನ್ನೆ (ಅ.19) ಮಹಾರಾಷ್ಟ್ರದ ಪುಣೆ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಆತಿಥೇಯ ಭಾರತ ಬಾಂಗ್ಲಾದೇಶದ ವಿರುದ್ಧ 7 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿ ಗೆಲುವಿನ ಓಟ ಮುಂದುವರಿಸಿದೆ. ಭಾರತದ ಈ ಗೆಲುವು ಬಾಂಗ್ಲಾ ಕ್ರೀಡಾಭಿಮಾನಿಗಳಿಗೆ ಮಾತ್ರವಲ್ಲ ಪಾಕಿಸ್ತಾನದ ನಟಿ ಸೆಹರ್ ಶಿನ್ವಾರಿಗೂ ಬೇಸರ ತರಿಸಿದೆ. ಏಕೆಂದರೆ, ಪಾಕಿಸ್ತಾನದ ಹೀನಾಯ ಸೋಲಿಗೆ ಬಾಂಗ್ಲಾ ಸೇಡು ತೀರಿಸಿಕೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿದ್ದಳು. ಅಲ್ಲದೆ, ಬಾಂಗ್ಲಾ ಆಟಗಾರರಿಗೆ ಶಿನ್ವಾರಿ ಮೆಗಾ ಆಫರ್ ಸಹ ನೀಡಿದ್ದಳು.
ಅ. 14ರಂದು ಗುಜರಾತಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಟೂರ್ನಿಯ 12ನೇ ಪಂದ್ಯದಲ್ಲಿ ಆತಿಥೇಯ ಭಾರತ ವಿರುದ್ಧ ಪಾಕಿಸ್ತಾನ ಹೀನಾಯ ಸೋಲನ್ನು ಅನುಭವಿಸಿತು. ಇದು ಪಾಕ್ ಕ್ರೀಡಾಭಿಮಾನಿಗಳಿಗೆ ಇನ್ನೂ ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರ ನಡುವೆ ಪಾಕ್ನ ಸೆಹರ್ ಶಿನ್ವಾರಿ ಬಾಂಗ್ಲಾ ವಿರುದ್ಧ ಭಾರತದ ಪಂದ್ಯಕ್ಕೂ ಮುನ್ನ ಟ್ವೀಟ್ ಮಾಡಿ ಬಾಂಗ್ಲಾ ಆಟಗಾರರಿಗೆ ಆಫರ್ ನೀಡಿದ್ದರು.
ಶಿನ್ವಾರಿ ಆಫರ್ ಏನಿತ್ತು? “ಇನ್ಶಾಅಲ್ಲಾ, ನನ್ನ ಬಂಗಾಲಿ ಬಂಧು ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲಿ. ನಾನಾಗ ಢಾಕಾಗೆ ಭೇಟಿ ನೀಡಿ ಬಂಗಾಲಿ ಹುಡುಗರೊಂದಿಗೆ ಡಿನ್ನರ್ ಡೇಟ್ಗೆ ತೆರಳುವೆ’ ಎಂದು ಶಿನ್ವಾರಿ ಆಫರ್ ನೀಡಿದ್ದಳು. ಅಲ್ಲದೆ, ಭಾರತ ತಂಡ ವಿಶ್ವಕಪ್ನಲ್ಲಿ ಸೆಮಿಫೈನಲ್ನಲ್ಲೇ ಹೊರಬೀಳಲಿದೆ ಎಂದು ಭವಿಷ್ಯ ನುಡಿದಿದ್ದಾಳೆ. ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಫೈನಲ್ನಲ್ಲಿ ಆಡಲಿವೆ ಎಂದಿದ್ದಾಳೆ. ಅಲ್ಲದೆ, ಪಾಕ್ ತಂಡ ವಿಶ್ವಕಪ್ ಎತ್ತಿಹಿಡಿಯುವ ಕನಸನ್ನೂ ಹಂಚಿಕೊಂಡಿದ್ದಾಳೆ.
ಬಾಂಗ್ಲಾ ಸೋತ ಬಳಿಕ ಮತ್ತೊಂದು ಪೋಸ್ಟ್ ಬಾಂಗ್ಲಾ ವಿರುದ್ಧ ಭಾರತದ ಸೋಲಿಗಾಗಿ ಕಾದಿದ್ದ ಶಿನ್ವಾರಿಗೆ ಭಾರೀ ನಿರಾಸೆಯಾಗಿದೆ. ಭಾರತ ವಿಶ್ವಕಪ್ ಟೂರ್ನಿಯಲ್ಲಿ ಗೆಲುವಿನ ಓಟ ಮುಂದುವರಿಸಿದೆ. ಬಾಂಗ್ಲಾ ತಂಡ ಸೋಲುತ್ತಿದ್ದಂತೆ ಮತ್ತೊಂದು ಟ್ವೀಟ್ ಮಾಡಿರುವ ಶಿನ್ವಾರಿ, ಬೆಂಗಾಲಿ ಹುಲಿಗಳೇ ಚೆನ್ನಾಗಿ ಆಡಿದ್ದೀರಿ. ಭಾರತದ ವಿರುದ್ಧ ಕನಿಷ್ಠ ಪಕ್ಷ ಅವರದೇ ನೆಲದಲ್ಲಿ ಒಳ್ಳೆಯ ಸವಾಲು ನೀಡಿದ್ದೀರಿ ಎಂದು ಶಿನ್ವಾರಿ ಹೊಗಳಿದ್ದಾಳೆ. ಇದೀಗ ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರತೀಯ ಕ್ರೀಡಾಭಿಮಾನಿಗಳು ಶಿನ್ವಾರಿಯನ್ನು ಟ್ರೋಲ್ ಮಾಡುತ್ತಿದ್ದಾರೆ.
ವಿರಾಟ ಪ್ರದರ್ಶನಕ್ಕೆ ಬಳಲಿದ ಬಾಂಗ್ಲಾ ಎಂಸಿಎ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ಗೆ ಇಳಿದ ಬಾಂಗ್ಲಾದೇಶ, ಲಿಟನ್ ದಾಸ್ (66 ರನ್, 82 ಎಸೆತ, 7 ಬೌಂಡರಿ) ಹಾಗೂ ತಂಜಿದ್ ಹಸನ್ (51 ರನ್, 43 ಎಸೆತ, 5 ಬೌಂಡರಿ, 3 ಸಿಕ್ಸರ್) ಒದಗಿಸಿದ ಉತ್ತಮ ಆರಂಭದ ಬಳಿಕ ಭಾರತದ ಬಿಗಿ ದಾಳಿಗೆ ಕುಸಿದು 8 ವಿಕೆಟ್‌ಗೆ 256 ರನ್‌ಗಳಿಗೆ ಸಮಾಧಾನ ಕಂಡಿತು. ಪ್ರತಿಯಾಗಿ ಸರಾಗ ಚೇಸಿಂಗ್ ನಡೆಸಿದ ಟೀಮ್ ಇಂಡಿಯಾ, ಶುಭಮಾನ್ ಗಿಲ್ (53 ರನ್, 55 ಎಸೆತ, 5 ಬೌಂಡರಿ, 2 ಸಿಕ್ಸರ್) ಅರ್ಧಶತಕ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಆಟದ ನೆರವಿನಿಂದ 41.3 ಓವರ್‌ಗಳಲ್ಲಿ 3 ವಿಕೆಟ್‌ಗೆ 261 ರನ್‌ಗಳಿಸಿ, ಇನ್ನೂ 51 ಎಸೆತ ಬಾಕಿಯಿರುವಂತೆಯೇ ಗೆದ್ದು ಬೀಗಿತು. ಇದರ ನಡುವೆಯೂ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲೇ ಉಳಿದಿದೆ. . ಚೇಸಿಂಗ್ ಮಾಸ್ಟರ್, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (103* ರನ್, 97 ಎಸೆತ, 6 ಬೌಂಡರಿ, 4 ಸಿಕ್ಸರ್) ಏಕದಿನ ಕ್ರಿಕೆಟ್‌ನಲ್ಲಿ ಸಿಡಿಸಿದ 48ನೇ ಶತಕ ಹಾಗೂ ಬೌಲರ್‌ಗಳ ಸಂಘಟಿತ ದಾಳಿಯೊಂದಿಗೆ ಟೀಮ್ ಇಂಡಿಯಾ, ಬಾಂಗ್ಲಾದೇಶ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿದೆ. ಈ ಮೂಲಕ ರೋಹಿತ್ ಶರ್ಮ ಪಡೆ ಟೂರ್ನಿಯಲ್ಲಿ ಅಜೇಯವಾಗಿ ಉಳಿದಿದೆ. (ಏಜೆನ್ಸೀಸ್)