ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಬೆಂಗಳೂರು ನಗರ ನೆಟ್ಬಾಲ್ ಅಸೋಸಿಯೇಷನ್ ಹಾಗೂ ಯುನಿಕ್ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಿದ್ದ ಎರಡು ದಿನಗಳ ರಾಜ್ಯಮಟ್ಟದ 5ನೇ ಸೀನಿಯರ್ ನೆಟ್ಬಾಲ್ ಚಾಂಪಿಯನ್ಷಿಪ್ ಭಾನುವಾರ ಮುಕ್ತಾಯಗೊಂಡಿದ್ದು, ಪುರುಷರ ವಿಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಮಹಿಳಾ ವಿಭಾಗದಲ್ಲಿ ಬೆಂಗಳೂರು ನಗರ ತಂಡಗಳು ಪ್ರಶಸ್ತಿ ಜಯಿಸಿವೆ.
ಪುರುಷರ ವಿಭಾಗದ ಫೈನಲ್ನಲ್ಲಿ ದ. ಕನ್ನಡ ತಂಡ 20-15ರಿಂದ ಬೆಂಗಳೂರು ನಗರ ತಂಡವನ್ನು ಮಣಿಸಿದರೆ, ಮಹಿಳಾ ವಿಭಾಗದಲ್ಲಿ ಬೆಂಗಳೂರು ನಗರ ತಂಡ 25-24ರಿಂದ ದಣ ಕನ್ನಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿವೆ. ಹಾಸನ, ಚಾಮರಾಜನಗರ ಹಾಗೂ ರಾಮನಗರ, ಮೈಸೂರು ತಂಡಗಳು ಕ್ರಮವಾಗಿ ಪುರುಷರ ಹಾಗೂ ಮಹಿಳಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿವೆ.