ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್ ಮೈದಾನದಲ್ಲಿ ನಡೆದ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ನಡುವಿನ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ತಂಡವು ಆತಿಥೇಯರ ವಿರುದ್ಧ ಮೇಲುಗೈ ಸಾಧಿಸಿದ್ದು, ಸರಣಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಬಾಂಗ್ಲಾದೇಶ ತಂಡವು ಸರಣಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ಗೆ ಇಳಿದ ಪಾಕಿಸ್ತಾನ ತಮಡವು ಮೊದಲ ಇನ್ನಿಂಗ್ಸ್ನಲ್ಲಿ 274 ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 172 ರನ್ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಆಡಿದ ಬಾಂಗ್ಲಾದೇಶ ತಂಡವು ಮೊದಲ ಇನ್ನಿಂಗ್ಸ್ನಲ್ಲಿ 262 ರನ್, ಎರಡನೇ ಇನ್ನಿಂಗ್ಸ್ನಲ್ಲಿ 4 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿ ಗೆಲುವಿನ ನಗೆ ಬೀರುವ ಮೂಲಕ ಆತಿಥೇಯರಿಗೆ ಭಾರೀ ಮುಖಭಂಗವನ್ನುಂಟು ಮಾಡಿತು.
ಬಾಂಗ್ಲಾದೇಶ ತಂಡವು ಈವರೆಗೆ 144 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 10 ಟೆಸ್ಟ್ ಸರಣಿಗಳನ್ನು ಮಾತ್ರ ಎಂಬುದು ವಿಶೇಷ. 2005 ರಲ್ಲಿ ಜಿಂಬಾಬ್ವೆ ತಂಡವನ್ನು 1-0 ಅಂತರದಿಂದ ಮಣಿಸಿ ಬಾಂಗ್ಲಾದೇಶ್ ಚೊಚ್ಚಲ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತ್ತು. ಇದಾದ ಬಳಿಕ 2009 ರಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 2-0 ಅಂತರದಿಂದ ಮಣಿಸಿ ಟ್ರೋಫಿ ಎತ್ತಿ ಹಿಡಿಯಿತು. ಇದು ಬಾಂಗ್ಲಾ ತಂಡದ ಮೊದಲ ವಿದೇಶಿ ಟೆಸ್ಟ್ ಸರಣಿ ಗೆಲುವು ಎಂಬುದು ವಿಶೇಷ.
ಇದಾದ ಬಳಿಕ 2015ರಲ್ಲಿ ಜಿಂಬಾಬ್ವೆ, 2019ರಲ್ಲಿ ವೆಸ್ಟ್ ಇಂಡೀಸ್, 2020ರಲ್ಲಿ ಜಿಂಬಾಬ್ವೆ ಹಾಗೂ 2021-22ರಲ್ಲಿ ಜಿಂಬಾಬ್ವೆ ವಿರುದ್ಧ ಹಾಗೂ 2022-23ರಲ್ಲಿ ಐರ್ಲೆಂಡ್ ಹಾಗೂ ಅಫ್ಘಾನಿಸ್ತಾನ ವಿರುದ್ಧ ಟೆಸ್ಟ್ ಸರಣಿಗಳನ್ನು ಬಾಂಗ್ಲಾದೇಶ ಗೆದ್ದುಕೊಂಡಿದೆ. ಇದೀಗ ಪಾಕಿಸ್ತಾನದ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿರುವ ಬಾಂಗ್ಲಾದೇಶ ಆತಿಥೇಯರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಆಸೆಯನ್ನು ಹೊಸಕಿಹಾಕಿದೆ.