ನವದೆಹಲಿ: ಜೂನ್ 01ರಿಂದ ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ.
15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ನೇಮಿಸಲಾಗಿದ್ದು, ಸಂಜು ಸ್ಯಾಮ್ಸನ್ ಹಾಗೂ ರಿಷಭ್ ಪಂತ್ರನ್ನು ಆಯ್ಕೆ ಮಾಡಲಾಗಿದೆ. ಅಚ್ಚರಿ ಎಂಬಂತೆ ಕೆ.ಎಲ್. ರಾಹುಲ್, ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ಗೆ ಕೊಕ್ ಕೊಡಲಾಗಿದೆ.
ಇದನ್ನೂ ಓದಿ: ಭಾರತ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ ಆದರೆ ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕ್ ನಾಯಕನ ಹೇಳಿಕೆ ವೈರಲ್
ಜೂನ್ 01ರಿಂದ ಯುಎಸ್ಎ ಹಾಗೂ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ಗೆ ಭಾರತ ತಂಡ ಪ್ರಕಟಗೊಂಡಿದ್ದು, ಟೀಮ್ ಇಂಡಿಯಾ ತನ್ನ ಆಭಿಯಾನವನ್ನು ಜೂನ್ 05ರಂದು ಐರ್ಲೆಂಡ್ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ.
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ. ಅದರಂತೆ ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಹಾಗೂ ಆವೇಶ್ ಖಾನ್ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.