BCCI: ಜೂ.3 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಐಪಿಎಲ್ ಫೈನಲ್‌ಗೆ ಭಾರತೀಯ ಸಶಸ್ತ್ರ ಪಡೆಗಳ ಮೂರೂ ಸೇನಾ ಮುಖ್ಯಸ್ಥರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಹ್ವಾನಿಸಿದೆ ಎಂದು ಮಂಗಳವಾರ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ:ಹದಿನೈದು ದಿನಗಳಲ್ಲೇ ಹೊಸ ವಿಭಾಗ ಆರಂಭ : ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಭರವಸೆ
ಇತ್ತೀಚಿನ 'ಆಪರೇಷನ್ ಸಿಂಧೂರ' ನಲ್ಲಿ ಅವರ "ವೀರ ಪ್ರಯತ್ನಗಳಿಗೆ" ಗೌರವ ಸಲ್ಲಿಸುವ ಸಮಾರಂಭ ಹಿನ್ನೆಲೆ ಸೇನಾ ಪಡೆಗಳ ಮುಖ್ಯಸ್ಥರಿಗೆ ಆಹ್ವಾನ ನೀಡಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾಧ್ಯಮ ಹೇಳಿಕೆಯಲ್ಲಿ ಈ ಘೋಷಣೆ ಮಾಡಿದ್ದಾರೆ.
"ಆಪರೇಷನ್ ಸಿಂಧೂರ್ ಯಶಸ್ಸನ್ನು ಆಚರಿಸಲು ಅಹಮದಾಬಾದ್‌ನಲ್ಲಿ ನಡೆಯಲಿರುವ ಐಪಿಎಲ್ ಫೈನಲ್‌ಗೆ ನಾವು ಎಲ್ಲಾ ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥರು, ಉನ್ನತ ಶ್ರೇಣಿಯ ಅಧಿಕಾರಿಗಳು ಮತ್ತು ಸೈನಿಕರಿಗೆ ಆಹ್ವಾನ ನೀಡಿದ್ದೇವೆ" ಎಂದು ಸೈಕಿಯಾ ಹೇಳಿದ್ದಾರೆ.(ಏಜೆನ್ಸೀಸ್)