IPL 2025: ಭಾರತ ಮತ್ತು ಪಾಕ್ ನಡುವಿನ ಸಂಘರ್ಷ ಹಿನ್ನೆಲೆ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇದೀಗ ಒಂದು ವಾರದ ಮಟ್ಟಿಗೆ ಮಾತ್ರ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಹೌದು, ಭಾರತ ಮತ್ತು ಪಾಕ್ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಗಡಿಭಾಗಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಈಗಾಗಲೇ ಎರಡು ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತದ ದಾಳಿಯಿಂದ ತತ್ತರಿಸಿರುವ ಪಾಕ್, ಪ್ರತೀಕಾರ ತೀರಿಸಿಕೊಳ್ಳುವ ಭರದಲ್ಲಿ ನಿನ್ನೆ (ಮೇ.08) ರಾತ್ರಿ ಪಂಜಾಬ್ ಮತ್ತು ರಾಜಸ್ಥಾನ ಗಡಿಗಳಲ್ಲಿ ಕ್ಷಿಪಣಿ ಮತ್ತು ಡೋನ್ ದಾಳಿ ನಡೆಸಿತು. ಈ ಬಿಸಿ ಇದೀಗ ಭಾರತದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳಿಗೂ ತಟ್ಟಿದೆ.
ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ರದ್ದಾದ ಬೆನ್ನಲ್ಲೇ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಂಡ ಬಿಸಿಸಿಐ, ಇದೀಗ ಉಳಿದ 16 ಐಪಿಎಲ್ ಪಂದ್ಯಗಳನ್ನು ರದ್ದು ಮಾಡುವುದರ ಜತೆ ಮೇ.25ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿಯನ್ನು ಆಟಗಾರರ ಸುರಕ್ಷತೆಯ ಮೇರೆಗೆ ರದ್ದು ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿತ್ತು. ಇದಾಗ ಕೆಲವೇ ಗಂಟೆಗಳ ಬಳಿಕ ಮತ್ತೆ ಬಿಸಿಸಿಐ ಮರು ನಿರ್ಧಾರ ಕೈಗೊಂಡಿದ್ದು, ಇದೀಗ ಒಂದು ವಾರದ ಮಟ್ಟಿಗೆ ಮುಂದುಡಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ಭಾರತೀಯ ಯೋಧರಿಗೆ ಸೆಲ್ಯೂಟ್: ವೀರರ ಧೈರ್ಯ, ತ್ಯಾಗಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿ ಕೊಹ್ಲಿ ಪೋಸ್ಟ್
ಹೆಚ್ಚಿನ ಫ್ರಾಂಚೈಸಿಗಳು ತಮ್ಮ ಆಟಗಾರರ ಕಳವಳ ಮತ್ತು ಭಾವನೆಗಳನ್ನು ಹಾಗೂ ಪ್ರಸಾರಕರು, ಪ್ರಾಯೋಜಕರು ಮತ್ತು ಅಭಿಮಾನಿಗಳ ಅಭಿಪ್ರಾಯಗಳನ್ನು ತಿಳಿಸಿದ ನಂತರ, ಎಲ್ಲಾ ಪ್ರಮುಖ ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ ಐಪಿಎಲ್ ಆಡಳಿತ ಮಂಡಳಿಯು ಈ ನಿರ್ಧಾರವನ್ನು ತೆಗೆದುಕೊಂಡಿತು(ಒಂದು ವಾರ ಮುಂದೂಡಿಕೆ) ಎಂದು ಇಂಡಿಯನ್ ಪ್ರೀಮಿಯರ್ ಲೀಗ್ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. (ಏಜೆನ್ಸಿಸ್).