BCCI: ಪ್ರಸಕ್ತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬಿಜಿಯಾಗಿರುವ ಟೀಮ್ ಇಂಡಿಯಾ, ಆಗಸ್ಟ್ ತಿಂಗಳಲ್ಲಿ ಬಾಂಗ್ಲಾ ಪ್ರವಾಸ ಕೈಗೊಳ್ಳಲು ಸಜ್ಜಾಗಿತ್ತು. ಆದರೆ, ಬಿಸಿಸಿಐ ತೆಗೆದುಕೊಂಡಿದ್ದ ನಿರ್ಧಾರವನ್ನು ಇದೀಗ ದಿಢೀರ್ ಕೈಬಿಟ್ಟಿದೆ. ಇದಕ್ಕೆ ಬಲವಾದ ಕಾರಣವೂ ಇದೆ.
ಆಗಸ್ಟ್ 17ರಿಂದ 31 ರವರೆಗೆ ಬಾಂಗ್ಲಾದೇಶ ಮತ್ತು ಟೀಮ್ ಇಂಡಿಯಾ ನಡುವೆ ಮೂರು ಏಕದಿನ ಮತ್ತು ಟಿ20 ಪಂದ್ಯಗಳ ಸರಣಿಯನ್ನು ಆಯೋಜಿಸಲಾಗಿತ್ತು. ಆದರೆ, ಈ ನಿರ್ಧಾರವನ್ನು ದಿಢೀರ್ ಬದಲಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಪ್ರಸ್ತುತ ಬಾಂಗ್ಲಾದಲ್ಲಿ ರಾಜಕೀಯ ಉದ್ವಿಗ್ನತೆ ತೀವ್ರವಾದ ಹಿನ್ನೆಲೆ ಭಾರತ ಪ್ರವಾಸವನ್ನು ರದ್ದುಗೊಳಿಸಿದೆ.
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಸರ್ಕಾರ ಪತನಗೊಂಡ ಬಳಿಕ ಅವರಿಗೆ ಭಾರತ ಉಳಿದುಕೊಳ್ಳಲು ಆಶ್ರಯ ನೀಡಿತು. ಇದು ಬಾಂಗ್ಲಾದಲ್ಲಿ ಕಿಚ್ಚು ಹಚ್ಚಿದೆ. ಅಶಾಂತಿಯ ವಾತಾವರಣ ಕಾಡುತ್ತಿರುವ ಸಮಯದಲ್ಲಿ ಟೀಮ್ ಇಂಡಿಯಾ ಪ್ರವಾಸ ಸರಿಯಲ್ಲ. ಇದು ಭದ್ರತಾ ಲೋಪಕ್ಕೂ ಕಾರಣವಾಗಬಹುದು ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಭಾರತ ಬಾಂಗ್ಲಾ ಪ್ರವಾಸವನ್ನು ರದ್ದುಗೊಳಿಸುವುದಾಗಿ ಬಿಸಿಸಿಐ ನಿರ್ಧರಿಸಿದೆ ಎಂದು ವರದಿ ಹೇಳಿದೆ.
ಇದನ್ನೂ ಓದಿ: ಮಲಪ್ಪುರಂ, ಪಾಲಕ್ಕಾಡ್ನಲ್ಲಿ ನಿಫಾ ವೈರಸ್ ಪತ್ತೆ! ಕೇರಳದ 3 ಜಿಲ್ಲೆಗಳಲ್ಲಿ ಅಲರ್ಟ್ | Nipah Virus
ಈ ವಿಷಯಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಚರ್ಚೆ ನಡೆಸುತ್ತಿವೆ. ಮುಂದಿನ ದಿನಗಳಲ್ಲಿ ಜಂಟಿಯಾಗಿ ಹೇಳಿಕೆ ನೀಡುವ ನಿರೀಕ್ಷೆಯಿದೆ. ಪ್ರವಾಸವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗುವುದು. ಮೂರು ಟಿ20 ಮತ್ತು ಏಕದಿನ ಪಂದ್ಯಗಳ ಸರಣಿಯನ್ನು ಸದ್ಯದ ಮಟ್ಟಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ಎರಡೂ ಕ್ರಿಕೆಟ್ ಮಂಡಳಿ ತಿಳಿಸಿವೆ,(ಏಜೆನ್ಸೀಸ್).