ಪರ್ತ್: ಇಲ್ಲಿನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯ ಆನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ (Border-Gavaskar Trophy) ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡವು ಆತಿಥೇಯರ ವಿರುದ್ಧ ಮೇಲುಗೈ ಸಾಧಿಸಿದ್ದು, ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಐಆ ತಂಡವು 7 ವಿಕೆಟ್ ನಷ್ಟಕ್ಕೆ 67 ರನ್ ಗಳಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಟೀಮ್ ಇಂಡಿಯಾ ನಿತೀಶ್ ರೆಡ್ಡಿ (41 ರನ್, 59 ಎಸೆತ, 6 ಬೌಂಡರಿ, 1 ಸಿಕ್ಸರ್), ರಿಷಭ್ ಪಂತ್ (37 ರನ್, 78 ಎಸೆತ, 3 ಬೌಂಡರಿ, 1 ಸಿಕ್ಸರ್) ಅಲ್ಪ ಕೊಡುಗೆಯ ಫಲವಾಗಿ 49.4 ಒವರ್ಗಳಲ್ಲಿ 150 ರನ್ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ಜೋಶ್ ಹೇಜಲ್ವುಡ್ (13-5-29-4), ಮಿಚೆಲ್ ಸ್ಟಾರ್ಕ್ (11-3-14-2), ಪ್ಯಾಟ್ ಕಮ್ಮಿನ್ಸ್ (15.4-2-67-2), ಮಿಚೆಲ್ ಸ್ಟಾರ್ಕ್ (5-1-12-2), ನ್ಯಾಥನ್ ಲಿಯಾನ್ (5-1-23-0) ರನ್ ನೀಡಿ ವಿಕೆಟ್ ಪಡೆದಿದ್ದಾರೆ.
ಟೀಮ್ ಇಂಡಿಯಾವನ್ನು 150 ರನ್ಗಳಿಗೆ ಆಲೌಟ್ ಮಾಡಿ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವನ್ನು ಇನ್ನಿಲ್ಲದಂತೆ ಕಾಡಿದ ಭಾರತದ ವೇಗಿಗಳು ಎದುರಾಳಿ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕುವ ಮುನ್ಸೂಚನೆ ನೀಡಿದ್ದಾರೆ. ನಾಯಕ ಜಸ್ಪ್ರೀತ್ ಬುಮ್ರಾ (10-3-17-4), ಮೊಹಮ್ಮದ್ ಸಿರಾಜ್ (9-6-17-2), ಹರ್ಷಿತ್ ರಾಣಾ (8-1-33-1) ದಾಳಿಗೆ ನಲುಗಿ ಮೊದಲ ದಿನದಾಟದ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 67 ರನ್ಗಳಿಸಿದೆ.
ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವೆ ನಡೆಯಲಿರುವ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ (Border-Gavaskar) ಟೆಸ್ಟ್ ಸರಣಿಯೂ ನವೆಂಬರ್ 22ಕ್ಕೆ ಆರಂಭವಾಗಲಿದ್ದು, ಜನವರಿ 7 ರವರೆಗೆ ಆಯೋಜನೆಗೊಂಡಿದೆ. ಈ ಸರಣಿ ಆಡಲು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಲಿದೆ. ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-2025 ಅಡಿಯಲ್ಲಿ ಆಡಲಾಗುತ್ತಿದೆ.